ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಬೆಂಗಳೂರು |
ಶಿವಮೊಗ್ಗ ಸೇರಿದಂತೆ ರಾಜ್ಯದ ಒಳನಾಡಿನ 13 ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಭೂಮಿಯ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಮುಂದುವರಿಯುವ ನಿರೀಕ್ಷೆಯಿದೆ ಎಂದಿದೆ.
ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಂದಿನ 48 ಗಂಟೆಗಳ ಕಾಲ ರಾಜ್ಯದ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ತುಮಕೂರುಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
Also read: ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿಯೊಂದಿಗೆ ಈ ವಿಷಯಕ್ಕೂ ಸಹ ಗಮನ ನೀಡಲಿ
ಎಲ್ಲೆಲ್ಲಿ ಯೆಲ್ಲೋ ಅಲರ್ಟ್?
ಮೇ 23ರ ಮಂಗಳವಾರ ಒಂದು ದಿನ ಮಾತ್ರ ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದ್ದು, ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ವರದಿಯಾಗಿದೆ.
ಎಷ್ಟು ದಿನ ಮಳೆ ಮುನ್ಸೂಚನೆ?
ಮೇ 25ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಮಳೆ ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ವ್ಯಾಪಕ ಮಳೆ ಸಾಧ್ಯತೆ ಇದೆ.
ಅದೇ ರೀತಿ ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಬೀರ್ದ, ಕೊಪ್ಪಳ, ಕಲಬುರಗಿ ಸೇರಿದಂತೆ ಇನ್ನಿತರ ಜಿಲ್ಲೆಗಳ ಪ್ರದೇಶಗಳಲ್ಲಿ ಉತ್ತಮ ಆಗಲಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post