ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕದಲ್ಲಿ ಮೊದಲಿನಿಂದಲೂ ಬಿಜೆಪಿ ಕಟ್ಟಿ, ಬಲಪಡಿಸಿದವರು ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಎಚ್.ಎನ್. ಅನಂತಕುಮಾರ್, ಬಿ.ಬಿ.ಶಿವಪ್ಪ ನವರು. ಅದು ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ ಎಂದು ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ Anantha kumar Hegde ಹೇಳಿದರು.
ಅವರು ಇಂದು ನಗರದಲ್ಲಿ ಸರಳವಾಗಿ ಹಮ್ಮಿಕೊಂಡಿದ್ದ ಕದಂಬ ಮಹಿಳಾ ಸಹಕಾರಿ ಬ್ಯಾಂಕ್ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಲೇಪ ಇರಬಾರದೆಂದು ಅತ್ಯಂತ ಸರಳವಾಗಿ ಈ ಕಾರ್ಯಕ್ರಮ ಆಯೋಜಿಸಿದ್ದು ಶ್ಲಾಘನೀಯ. ಬ್ಯಾಂಕುಗಳು ಹೊಸತನ, ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಬೇಕು ಎಂದರು.
ಈ ಕಾರ್ಯಕ್ರಮಕ್ಕೆ ಆರ್.ಎಸ್.ಎಸ್.ನ ಪ್ರಮುಖರಲ್ಲೊಬ್ಬರಾದ ಪಟ್ಟಾಭಿರಾಮ್ ಆಗಮಿಸಿದ್ದೂ ವಿಶೇಷವಾಗಿದೆ. ಬ್ಯಾಂಕು ಗ್ರಾಹಕರಿಗೆ ಉತ್ತಮ ಸೌಲಭ್ಯ ನೀಡಿ ಉನ್ನತಿಗೇರಲಿ ಎಂದು ಹಾರೈಸಿದರು.“ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಕೆ.ಈ.ಕಾಂತೇಶ್, ಪಟ್ಟಾಭಿರಾಮ್ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















