ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೈಸೂರು ದಸರಾ #Mysore Dasara ಉದ್ಘಾಟನೆಗೆ ಬಾನು ಮುಷ್ತಾಕ್ #Banu Mushthaq ಅವರನ್ನು ಆಹ್ವಾನಿಸುವ ನಿರ್ಧಾರವನ್ನು ಮರುಪರಿಶೀಲಿಸಲು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಮೈಸೂರು ದಸರಾ ಕೇವಲ ಸಾಂಸ್ಕøತಿ ಹಬ್ಬ ಅಲ್ಲ. ಅದೊಂದು ಧಾರ್ಮಿಕ ಹಬ್ಬ ಆಗಿದೆ. 9 ದಿನಗಳ ನವರಾತ್ರಿ ವೇಳೆ ಕಾಳಿ, ಮಹಾಲಕ್ಷ್ಮಿ, ಸರಸ್ವತಿ ದೇವಿಯವರ ಆರಾಧನೆ ನಡೆಯುತ್ತಿದ್ದು, 10ನೇ ದಿನ ಚಾಮುಂಡೇಶ್ವರಿ ಮಹಿಷಾಸುರನ ಸಂಹಾರ ಮಾಡಿ ವಿಜಯೋತ್ಸವವನ್ನು ಆಚರಿಸಲಾಗುವುದು. ಇದು ಹಿಂದೂಗಳ ಪವಿತ್ರ ಹಬ್ಬ. ಇದರ ಉದ್ಘಾಟನೆಗೆ ಬರುವವರಿಗೆ ಮೂರ್ತಿ ಪೂಜೆಯ ಮೇಲೆ ಭಕ್ತಿ ಹಾಗೂ ನಾಡದೇವಿಯ ಮೇಲೆ ಗೌರವ ಹೊಂದಿರಬೇಕು. ಆದರೆ, ಬಾನು ಮುಷ್ತಾಕ್ ಅವರು ಈ ಹಿಂದಿನ ಭಾಷಣಗಳಲ್ಲಿ ನಾಡದೇವಿ ಭುವನೇಶ್ವರಿಯನ್ನು ನಂಬುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ದತ್ತಪೀಠದ ಸಂದರ್ಭದಲ್ಲೂ ಮುಸ್ಲಿಂ ಸಮುದಾಯದ ಪರವಾಗಿ ಮಾತನಾಡಿದ್ದಾರೆ. ಆದ್ದರಿಂದ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದು ಸರಿಯಲ್ಲ. ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಇದು ಧಕ್ಕೆ ತರುತ್ತದೆ ಎಂದು ಮನವಿದಾರರು ತಿಳಿಸಿದರು.

ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಪ್ರಮುಖರಾದ ದಿನೇಶ್ ಚೌಹಾಣ್, ಮಹೇಶ್, ಪರಿಸರ ರಮೇಶ್, ರಮೇಶ್ ಬಾಬು ಜಾಧವ್, ವಾಗೀಶ್, ಪ್ರಫುಲ್ಲಚಂದ್ರ, ನಟರಾಜ್, ಜಗನ್ನಾಥ್, ಆನಂದ್ ರಮೇಶ್ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post