ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಸವಣ್ಣ #Basavanna ಅವರ ವಚನಗಳು ಮತ್ತು ಕಾಯಕ ಸಂದೇಶ ಇಂದಿಗೂ ಪ್ರಸ್ತುತ ಎಂದು ಸರ್ ಎಂ.ವಿ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಜಿ.ಎಸ್.ಅಶೋಕ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಬಸವಣ್ಣ ಅವರ ವಚನಗಳು ಸಾರ್ವಕಾಲಿಕ. ಯಾವುದೇ ಜಾತಿ ಭೇದವಿಲ್ಲದೆ ಸಮಾಜದ ಏಳಿಗೆಗೆ ಶ್ರಮಿಸಿದರು. ರೋಟರಿ ಕ್ಲಬ್‌ಗಳು ಸಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ಅಧಕ್ಷ ಡಿ.ಕಿಶೋರ್ ಕುಮಾರ್ ಮಾತನಾಡಿ, ಬಸವಣ್ಣ ಅವರ ವಚನಗಳು ಪ್ರತಿಯೊಬ್ಬ ಯುವ ಜನತೆ ಮತ್ತು ನಾವುಗಳೆಲ್ಲರೂ ಪರಿಪಾಲಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ಕಾರ್ಯದರ್ಶಿ ಬಿ.ಆರ್.ಧನಂಜಯ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ. ಗುಡದಪ್ಪ ಕಸಬಿ, ಡಾ. ಪರಮೇಶ್ವರ ಶಿಗ್ಗಾವ್, ಚಂದ್ರಹಾಸ್ ಪಿ ರಾಯ್ಕರ್, ಬಿ.ಗಂಗಪ್ಪ, ಬಿ ಎಚ್ ನಿರಂಜನ, ಅರುಣ್ ಮೂಲೆಮನೆ ಹಾಗೂ ಇತರ ಎಲ್ಲಾ ರೊಟೇರಿಯನ್ ಸದಸ್ಯರು ಉಪಸ್ಥಿರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post