No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಬಸವೇಶ್ವರ ಪುತ್ಥಳಿ ಅನಾವರಣ: ಬಿ.ಎ.ಬಸವರಾಜು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 12, 2021
in ಶಿವಮೊಗ್ಗ
0
ಧರ್ಮೇಗೌಡರ ನಿಧನಕ್ಕೆ ಸಚಿವ ಬೈರತಿ ಬಸವರಾಜ್ ಸಂತಾಪ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಶಿವಮೊಗ್ಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ನಗರದ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ ಕೈಗೊಂಡು ರಾಜ್ಯದ ಮಾದರಿ ನಗರಗಳಲ್ಲೊಂದನ್ನಾಗಿ ರೂಪಿಸಲಾಗುವುದು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಅವರು ಹೇಳಿದರು.

ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಗೊಳಪಡುವ ಎಲ್ಲಾ ವಾರ್ಡುಗಳಲ್ಲಿ ಕೈಗೊಂಡಿರುವ ರಸ್ತೆ, ಚರಂಡಿ, ಉದ್ಯಾನವನ ಹಾಗೂ ಇತರೆ ಕಾಮಗಾರಿಗಳನ್ನು ಸಚಿವ ಕೆ.ಎಸ್.ಈಶ್ವರಪ್ಪ, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಿಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು.

ಶಿವಮೊಗ್ಗ ಮಲೆನಾಡಿನ ಪ್ರದೇಶವಾಗಿರುವುದರಿಂದ ಮಳೆಗಾಲ ಆರಂಭವಾಗಿ ಯೋಜನೆಗಳಿಗೆ ಅಡಚಣೆ ಉಂಟಾಗಬಹುದಾದ ಹಿನ್ನೆಲೆಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಕೈಗೊಂಡಿರುವ ಅನೇಕ ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನೂ ಕೆಲವು ಕಾಮಗಾರಿಗಳು ಕೋವಿಡ್ ಹಿನ್ನೆಲೆಯಲ್ಲಿ ಮಂದಗತಿಯಲ್ಲಿ ಸಾಗಿವೆ. ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು 150ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಗರದ ಬಹುಜನರ ಬೇಡಿಕೆಯಂತೆ ಗಾಂಧೀ ಪಾರ್ಕ್‌ನ ಪ್ರವೇಶದ್ವಾರದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು ಎಂದರು.

ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಶಿಕಾರಿಪುರ ಪಟ್ಟಣದ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಸಲ್ಲಿಸಲಾಗಿದ್ದ 13ಕೋಟಿ ರೂ.ಗಳ ಕಾಮಗಾರಿಗಳ ಪ್ರಸ್ತಾವನೆಗೆ ಮಾನ್ಯ ಮುಖ್ಯ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗ್ರಾಮೀಣಾಭಿವೃದ್ದಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಇರುವ ಅಡತಡೆಗಳನ್ನು ಸರಿಪಡಿಸಿ, ಪುತ್ಥಳಿ ಅನಾವರಣಗೊಳಿಸಲಾಗುವುದು. ಈ ಸಂಬಂಧ ಪ್ರಸಕ್ತ ಅಧಿವೇಶನದಲ್ಲಿ ಅನುಮೋದನೆ ಪಡೆದು ಕ್ರಮವಹಿಸಲಾಗುವುದು ಎಂದರು.

ನಗರರಾಭಿವೃದ್ಧಿ ಇಲಾಖೆಯಿಂದ ಈ ಹಿಂದೆ ನಾಲ್ಕು ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದ್ದು, ಯೋಗಭವನ ಶೀಘ್ರದಲ್ಲಿ ಪೂರ್ಣಗೊಂಡು ಉದ್ಘಾಟನೆಗೊಳ್ಳಲಿದೆ. ಅಲ್ಲದೇ 2.25ಕೋಟಿ ರೂ.ಗಳ ವೆಚ್ಚದಲ್ಲಿ ನಗರದ 15ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ತುಂಗಾ ಮೇಲ್ದಂಡೆ ಯೋಜನೆಯಡಿ ಚಾನಲ್‌ನ ಇಕ್ಕೆಲಗಳಲ್ಲಿ ಸುಮಾರು 12ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ 12.50ಕೋಟಿ ರೂ.ಗಳ ವೆಚ್ಚದಲ್ಲಿ ಹಸಿರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ನಗರದ ಹೊರ ವಲಯದಲ್ಲಿ ವಿವಿಧ ಕಾಮಗಾರಿಗಳಿಗೆ 96ಕೋಟಿ ರೂ.ಗಳ ಅನುದಾನವನ್ನು ನಗರಾಭಿವೃದ್ಧಿ ಸಚಿವರು ಬಿಡುಗಡೆಗೊಳಿಸಿದ್ದಾರೆ. ಅಲ್ಲದೇ ಈ ಹಿಂದೆ ಮಂಜೂರು ಮಾಡಲಾಗಿದ್ದ 123ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ಎರಡನೇ ಹಂತದಲ್ಲಿ ಹೊರ ವಲಯದ ಕುಡಿಯುವ ನೀರಿನ ಯೋಜನೆಗೆ ಅನುದಾನ ಬಿಡುಗಡೆಗೊಳಿಸಿದ್ದು, ಅನುಮೋದನೆ ದೊರೆತಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿವೆ ಎಂದರು.

ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಚನ್ನಬಸಪ್ಪ ಸೇರಿದಂತೆ ನಗರಪಾಲಿಕೆಯ ಅಧಿಕಾರಿ ಸಿಬ್ಬಂಧಿಗಳು, ಗುತ್ತಿಗೆದಾರರು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Chief MinisterKannada NewsKannada News LiveKannada News OnlineKannada News WebsiteKannada WebsiteLocal News KannadaMalnad NewsMinister B A BasavarajuMinister EshwarappaNews in KannadaNews KannadaShimogaShivamoggaShivamogga Newsನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜುಮಲೆನಾಡು_ಸುದ್ಧಿಮುಖ್ಯಮಂತ್ರಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪ
Share197Tweet123Send
Previous Post

ಕಲಬುರುಗಿ: ಚೈಲ್ಡ್ ಲೈನ್‌ಗೆ ಬಂದ ಅನಾಮಿಕ ಕರೆ ಆಧಾರಿಸಿ ಐದು ಬಾಲ್ಯ ವಿವಾಹಕ್ಕೆ ತಡೆ

Next Post

ಯಡಿಯೂರಪ್ಪ ಸಮರ್ಥ ಮುಖ್ಯಮಂತ್ರಿ: ನಾಯಕತ್ವ ಬದಲಾವಣೆಯ ಅವಶ್ಯಕತೆಯಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯಡಿಯೂರಪ್ಪ ಸಮರ್ಥ ಮುಖ್ಯಮಂತ್ರಿ: ನಾಯಕತ್ವ ಬದಲಾವಣೆಯ ಅವಶ್ಯಕತೆಯಿಲ್ಲ

ಯಡಿಯೂರಪ್ಪ ಸಮರ್ಥ ಮುಖ್ಯಮಂತ್ರಿ: ನಾಯಕತ್ವ ಬದಲಾವಣೆಯ ಅವಶ್ಯಕತೆಯಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL