ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಭದ್ರಾ ಜಲಾಶಯ ತಡೆಗೋಡೆ ಕುಸಿತ ಸ್ಥಳದಲ್ಲಿ, ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ತಿಳಿಸಿದ್ದಾರೆ.
ತಡೆಗೋಡೆ ನಿರ್ಮಾಣಕ್ಕೆ ಸರ್ಕಾರದಿಂದ 2 ಕೋಟಿ ರೂ. ಅನುದಾನ ಮಂಜೂರಾಗಿದೆ. ಮಳೆಗಾಲದ ನಂತರ ಕಾಮಗಾರಿ ನಡೆಸಲಾಗುವುದು. ತಾವು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೆನೆ ಎಂದು ಸ್ಪಷ್ಟಪಡಿಸಿದ್ದಾರೆ.
‘ತಡೆಗೋಡೆ ಕುಸಿತ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುವುದು’ ಎಂದು ಭದ್ರಾ ಜಲಾಶಯ ಎಇಇ ಕೆ.ಆರ್.ಪ್ರಸನ್ನರವರು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















