ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮಲೆನಾಡು ಭಾಗದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯ ಭರ್ತಿಯಾಗಿದ್ದು, ಇಂದು ಮುಂಜಾನೆಯೂ ಸಹ ನದಿಗೆ 8251 ಕ್ಯೂಸೆಕ್ಸ್ ನೀರನ್ನು ಹರಿಸಲಾಗಿದೆ.
186 ಅಡಿಗಳ ಪೂರ್ಣ ಮಟ್ಟದಲ್ಲಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಮುಂಜಾನೆ 6 ಗಂಟೆಗೆ ಕ್ಟಸ್ಟ್ ಗೇಟ್ ಮೂಲಕ ನದಿಗೆ 8251 ಕ್ಯೂಸೆಕ್ಸ್ ನೀರನ್ನು ಹರಿಸಲಾಗಿದೆ.
ಇಂದು ಮುಂಜಾನೆಯ ಮಾಹಿತಿಯಂತೆ 14304 ಕ್ಯೂಸೆಕ್ಸ್ ನೀರು ಒಳಹರಿವಿದ್ದು, ಮಳೆ ಮುಂದುವರೆದರೆ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.
ಇನ್ನು, ಬಾಳೇಹೊನ್ನೂರು ವ್ಯಾಪ್ತಿಯಿಂದ 15092 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ಇದೂ ಸಹ ಭದ್ರಾ ಮುಖ್ಯ ಜಲಾಶಯಕ್ಕೆ ಹರಿದುಬರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯಿಂದ ಮತ್ತಷ್ಟು ನೀರನ್ನು ಹರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post