ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಪಟಾಕಿ ಕಿಡಿ ತೆಂಗಿನಮರಕ್ಕೆ ತಹೊತ್ತಿಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಬೊಮ್ಮನಕಟ್ಟೆ ಯಲ್ಲಿ ನಡೆದಿದೆ.
ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ನೆರೆಹೊರೆಯವರು ಹೊಡೆದ ಪಟಾಕಿ ಸಿಡಿದ ಪರಿಣಾಮ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ರಸ್ತೆಯಲ್ಲಿರುವ ಫಯಾಜ್ ಖಾನ್ ಎಂಬುವರ ಮನೆಯ ತೆಂಗಿನಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಫಯಾಜ್ ಖಾನ್ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸುವ ಮೂಲಕ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ.
ಅಗ್ನಿಶಾಮಕ ಠಾಣಾಧಿಕಾರಿ ಎನ್.ವಸಂತಕುಮಾರ್ ನೇತೃತ್ವದಲ್ಲಿ ಅ.ಶಾ.ಸಿಬ್ಬಂದಿಗಳಾದ ಅಶೋಕ್ ಕುಮಾರ್, ವಿನೂತನ್.ಎಂ., ಹರೀಶ್ ಹೆಚ್.ಎಂ., ಕುಮಾರ್ ಎಸ್.ಹೆಚ್. ಕಾರ್ಯಾಚರಣೆ ನಡೆಸುವ ಮೂಲಕ ಬೆಂಕಿ ನಂದಿಸಿದರು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post