ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆ(ಎಂಪಿಎಂ) ಹಣಕಾಸು ಇಲಾಖೆಯ ಪ್ರಧಾನ ವ್ಯವಸ್ಥಾಪಕ ವಿಶ್ವನಾಥ್ ಮಲಗನ್(62) ಅವರು ವಿಧಿವಶರಾಗಿದ್ದಾರೆ.
ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಕೊನೆಯುಸಿರೆಳೆದಿದ್ದಾರೆ.
ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ
ವಿಶ್ವನಾಥ್ ಅವರು ನಿವೃತ್ತರಾಗಿದ್ದರೂ ಸರ್ಕಾರದ ಆದೇಶದ ಅನ್ವಯ ಎಂಪಿಎಂ ಸೇವೆಯಲ್ಲಿ ಮುಂದುವರೆದಿದ್ದರು.
ಈ ಕುರಿತಂತೆ ಮಾತನಾಡಿದ ಅಮ್ ಅದ್ಮಿ ಪಕ್ಷದ ಜಿಲ್ಲಾಧ್ಯಕ್ಷ ರವಿಕುಮಾರ್, ವಿಶ್ವನಾಥ್ ಅವರು ಅತ್ಯಂತ ಸ್ವಚ್ಛಾರಿತ್ರದ ಅಧಿಕಾರಿಯಾಗಿದ್ದರು. ನೌಕರರಿಗಿಂತಲೂ ಗುತ್ತಿಗೆ ಕಾರ್ಮಿಕರು ಹೆಚ್ಚಿನ ಕೆಲಸ ಮಾಡುತ್ತಾರೆ. ಹೀಗಾಗಿ, ಗುತ್ತಿಗೆ ಕಾರ್ಮಿಕರಿಗೆ ಸಮಾನ ವೇತನ ನೀಡಬೇಕು ಎಂದು ಎಂಡಿ ಅವರಿಗೆ ಸಲಹೆ ನೀಡಿದ್ದ ಏಕೈಕ ಅಧಿಕಾರಿ ವಿಶ್ವನಾಥ್ ಅವರು. ಅವರ ನಿಧನ ತುಂಬಲಾರದ ನಷ್ಟವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post