ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಭದ್ರಾವತಿ |
ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರ ನಿರಂತರ ಪ್ರಯತ್ನ ಹಾಗೂ ನಗರದ ನಾಗರಿಕರ ಒತ್ತಡದ ಪ್ರಯತ್ನದ ಫಲವಾಗಿ ವಿಐಎಸ್’ಎಲ್ VISL ಕಾರ್ಖಾನೆ ಆಗಸ್ಟ್ 10ರಿಂದ ಪುನಾರಂಭವಾಗಲಿದ್ದು, ಈ ಮೂಲಕ ಸಂಸದರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.
ಶಿವಮೊಗ್ಗ ಕ್ಷೇತ್ರದ ಜನಪ್ರಿಯ ಸಂಸದ ಬಿ.ವೈ. ರಾಘವೇಂದ್ರ ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಸಂಪರ್ಕಿಸಿ ವಿಐಎಸ್’ಎಲ್ ಉಳಿವಿನ ಬಗ್ಗೆ ಮಾತುಕತೆ ನಡೆಸಿದರು.
ಸೈಲ್ ಆಡಳಿತ ಮಂಡಳಿಯು ಭದ್ರಾವತಿ ವಿಎಸ್‌ಐಎಲ್’ನಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಪುನರಾರಂಭಿಸಲು ಅಂತಿಮವಾಗಿ ಒಪ್ಪಿಕೊಂಡಿರುವುದನ್ನು ತಿಳಿಸಲು ನನಗೆ ಅತ್ಯಂತ ಸಂತೋಷವಾಗುತ್ತಿದೆ ಎಂದು ಸಂಸದರು ತಿಳಿಸಿದ್ದಾರೆ.
ಅದರನ್ವಯ ಬಾರ್‌ಮಿಲ್ ಕಾರ್ಯಾಚರಣೆಗಳು ಆ.10 ರಿಂದ ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ.
ವಿಐಎಸ್‌ಎಲ್‌ನ್ನು ನಂಬಿಕೊಂಡಿರುವ ಉದ್ಯೋಗಿ ಸಮುದಾಯಕ್ಕೆ ಮತ್ತು ಭದ್ರಾವತಿಯ ಜನ ಸಾಮಾನ್ಯರಿಗೆ ಈ ಒಂದು ನಿರ್ಧಾರ ಮಹತ್ವದ ಕ್ಷಣವಾಗಿದೆ ಎಂಬುದಾಗಿ ಭಾವಿಸಿದ್ದೇನೆ ಎಂದು ತಿಳಿಸಿರುವ ರಾಘವೇಂದ್ರ ಅವರು, ಕೇಂದ್ರ ಸರ್ಕಾರದ ಸಂಬಂಧಿಸಿದ ಮಂತ್ರಿಗಳೊಂದಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂಗೆ ನಡೆಸಲಾದ ನಿರಂತರ ಪ್ರಯತ್ನದ ಫಲವಾಗಿ ಇಂತಹ ಒಂದು ಮಹತ್ತರವಾದ ನಿರ್ಣಯವನ್ನು ಸೈಲ್ ಕೈಗೊಳ್ಳಲು ಸಹಕಾರವಾಗಿದ್ದು, ಈ ಮಹತ್ವದ ಮೈಲಿಗಲ್ಲನ್ನು ಪಡೆಯಲು ದಣಿವರಿಯಿಲ್ಲದೆ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ವಿಐಎಸ್’ಎಲ್’ನ ಪುನರುಜ್ಜೀವನಕ್ಕೆ ಕೇಂದ್ರ ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿದ ಅವರ ಅಚಲ ಬದ್ಧತೆ ಗಾಗಿ ಕೇಂದ್ರ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿಐಎಸ್’ಎಲ್ ಶೀಘ್ರದಲ್ಲಿಯೇ ಉನ್ನತ ಯಶಸ್ಸು ಮತ್ತು ಸಮೃದ್ದಿಯ ಹಾದಿಯಲ್ಲಿ ಸಾಗಿ ತನ್ನ ಗತ ವೈಭವವನ್ನು ಮರಳಿ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಇಂತಹ ಒಂದು ಮಹತ್ತರವಾದ ತೀರ್ಮಾನ ಬರುವಲ್ಲಿ ತಾಳ್ಮೆಯಿಂದ ಸಹಕರಿಸಿದ ವಿಐಎಸ್’ಎಲ್’ನ ಎಲ್ಲಾ ನೌಕರರ ಬಾಂಧವರಿಗೆ, ಕಾರ್ಮಿಕ ಸಂಘಟನೆ ಮುಖಂಡರಿಗೆ, ಜನಪ್ರತಿನಿಧಿಗಳಿಗೆ ರಾಘವೇಂದ್ರ ಅವರು ಧನ್ಯವಾದ ಅರ್ಪಿಸಿದ್ದಾರೆ.
ವಿಐಎಸ್‌ಎಲ್ ಮುಚ್ಚೇ ಹೋಯಿತು. ವಿಐಎಸ್‌ಎಲ್ ಕಾರ್ಮಿಕರು ಬೀದಿಗೆ ಬರುತ್ತಾರೆ. ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ಪರಿಶ್ರಮದ ಫಲವಾಗಿ ವಿಐಎಸ್’ಎಲ್ ಆರಂಭವಾಗಿತ್ತು. ವಿಶ್ವದಲ್ಲೇ ಇಲ್ಲಿ ತಯಾರಿಸುವ ಕಬ್ಬಿಣ ಮತ್ತು ಉಕ್ಕು ಜಗತ್ ಪ್ರಸಿದ್ದಿ ಪಡೆದಿತ್ತು. ಒಂದು ಹಂತದಲ್ಲಿ ವಿಐಎಸ್’ಎಲ್ ನಷ್ಟದತ್ತ ಸಾಗಿತ್ತು. ಈ ಕಾರ್ಖಾನೆ ಬಂದ್ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಆದರೆ ಇದೀಗ ನಮ್ಮೆಲ್ಲರ ಅಚ್ಚುಮೆಚ್ಚಿನ ಸಂಸದ ಬಿವೈಆರ್ ಅವರು ಕೇಂದ್ರದ ಮೇಲೆ ಒತ್ತಡ ಹೇರಿ ವಿಐಎಸ್‌ಎಲ್ ಉಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದು, ಅದರಲ್ಲಿ ಯಶಸ್ಸು ಕಂಡಿದ್ದಾರೆ.
ನಿಜಕ್ಕೂ ಬಿವೈಆರ್ ಅವರಿಗೆ ಜಿಲ್ಲೆಯ ಜನರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಖ್ಯಾತ ಕೈಗಾರಿಕೋದ್ಯಮಿ ಎಸ್. ರುದ್ರೇಗೌಡರು, ಕೈಗಾರಿಕೋದ್ಯಮಿಗಳಾದ ಡಿ.ಎಸ್. ಚಂದ್ರಶೇಖರ್, ಜ್ಯೋತಿಪ್ರಕಾಶ್, ಎಚ್.ವಿ. ಸುಬ್ರಹ್ಮಣ್ಯ, ವಿ.ಕೆ. ದಿವೇಕರ್, ನಂಜುಂಡಶೆಟ್ಟರು, ಭೂಪಾಳಂ ಶಶಿಧರ್ ಹಾಗೂ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಾಸಕ ಎಸ್. ಎನ್. ಚನ್ನಬಸಪ್ಪ, ಎಸ್. ದತ್ತಾತ್ರಿ ಇನ್ನಿತರರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post