ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನ ಕಂಬದಾಳ್ ಹೊಸೂರು ಗ್ರಾಮದಲ್ಲಿ ನಾಳೆ ಮಾಜಿ ಶಾಸಕ ಎಂ.ಜೆ. ಅಪ್ಪಾಜಿಯವರ ಪುಣ್ಯಸ್ಮರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಅಪ್ಪಾಜಿಗೌಡರ ಪತ್ನಿ ಶಾರದಾ, ಪುತ್ರ, ಜೆಡಿಎಸ್ ತಾಲೂಕು ಅಧ್ಯಕ್ಷ ಕರುಣಾಮೂರ್ತಿ, ತಾಲೂಕು ಪಂಚಾಯ್ತಿ ಸದಸ್ಯರು ಹಾಗೂ ಎಂ.ಜೆ ಅಪ್ಪಾಜಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಈ ಕುರಿತಂತೆ ಮಾತನಾಡಿದ ಗ್ರಾಮಸ್ಥರು, ಅಪ್ಪಾಜಿ ಗೌಡರಿಂದ ಜನ ಸಾಮಾನ್ಯರಿಗಾದ ಸಹಾಯ ಬಹಳಷ್ಟಿದೆ. ಇಂತಹ ವ್ಯಕ್ತಿಯ ಆತ್ಮಕ್ಕೆ ಶಾಂತಿ ಕೋರುವುದು ನಮ್ಮೆಲ್ಲರ ಕರ್ತವ್ಯ. ಹೀಗಾಗಿ, ಅವರ ಪುಣ್ಯಸ್ಮರಣೆಯಲ್ಲಿ ಗ್ರಾಮಸ್ಥರು, ಅಪ್ಪಾಜಿ ಗೌಡರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post