ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಂದೂ ಕಾರ್ಯಕರ್ತ ಹರ್ಷ ಎಂಬಾತನನ್ನು ಹತ್ಯೆ ಮಾಡಿದ ಆರೋಪಿಗಳು ಯಾರೇ ಆಗಿದ್ದರೂ ಅವರಿಗೆ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರು ಆಗ್ರಹಿಸಿದ್ದಾರೆ.
Also Read: ಶಿವಮೊಗ್ಗ ನಗರದಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿರುವ ಅವರು, ಇದೊಂದು ಅತ್ಯಂತ ಹೇಯ ಕೃತ್ಯ. ಇಂತಹ ಕೃತ್ಯವನ್ನು ಯಾರೇ ಮಾಡಿದ್ದರೂ, ಅವರು ಯಾವುದೇ ಧರ್ಮಕ್ಕೆ ಸೇರಿದ್ದರೂ ಅಂತಹವರಿಗೆ ಕಾನೂನು ರೀತಿಯನ್ನು ಕಠಿಣ ಶಿಕ್ಷಯಾಗಬೇಕು ಎಂದಿದ್ದಾರೆ.

ಆಡಳಿತ ಪಕ್ಷದ ಶಾಸಕರು, ಗೃಹ ಸಚಿವರು, ಸಚಿವರು ಸೇರಿದಂತೆ ಘಟಾನುಘಟಿಗಳು ಇರುವ ನಮ್ಮ ಜಿಲ್ಲೆಯಲ್ಲಿಯೇ ಇಂತಹ ಕೃತ್ಯ ನಡೆದಿರುವುದು ಸರ್ಕಾರ ವೈಫಲ್ಯವೇ ಕಾರಣವಾಗಿದೆ ಎಂದು ಕಿಡಿ ಕಾರಿದ್ದಾರೆ. ದುಷ್ಕರ್ಮಿಗಳ ಯಾರೇ ಆಗಿದ್ದರೂ ಪೊಲೀಸ್ ಇಲಾಖೆ ಆದಷ್ಟು ಶೀಘ್ರ ಅವರನ್ನು ಪತ್ತೆ ಹಚ್ಚಿ, ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post