ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಉಕ್ಕಿನ ನಗರಿಯ ಎರಡು ಕಾರ್ಖಾನೆಯ ಉಳಿವಿಗಾಗಿ ವಿಐಎಸ್’ಎಲ್ ಹಾಗೂ ಎಂಪಿಎಂಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಹಿಂದಿನ ಸರ್ಕಾರಗಳ ತಪ್ಪು ನಿರ್ಧಾರಗಳಿಂದ ಭದ್ರಾವತಿಯ ಎರಡೂ ಕಾರ್ಖಾನೆಗಳು ಸಂಕಷ್ಟಕ್ಕೆ ಸಿಲುಕಿವೆ. ಇದನ್ನು ಉಳಿಸುವುದು ನಮ್ಮ ಮೊದಲ ಆದ್ಯತೆ. ಹೀಗಾಗಿ, ಖಾಸಗೀಕರಣ ಮಾಡಲಾಗುತ್ತಿದ್ದು, ಈ ಕುರಿತಂತೆ ಟೆಂಡರ್ ಪ್ರಕ್ರಿಯೆ ಕೂಡಾ ನಡೆದಿದೆ ಎಂದರು.
ಎಂಪಿಎಂಗೆ ಸೇರಿದ ಅರಣ್ಯ ಭೂಮಿಯ ಲೀಸ್ ಅವಧಿ ಮುಗಿದಿದೆ. ಈಗಾಗಲೇ ಅದನ್ನು ಎಂಪಿಎಂ ಆಡಳಿತಕ್ಕೆ ವಶಪಡಿಸಿಕೊಳ್ಳಲಾಗಿದೆ. ನಮ್ಮೂರಿಗೆ ಅಕೇಶಿಯಾ ಬೇಡ ಎಂಬ ಹೋರಾಟವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post