ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿ #Bhadravathi ತಾಲ್ಲೂಕಿನ ಮೂಡಲ ವಿಠಲಾಪುರ ದಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ #SSLCExam ಹಾಜರಾಗಬೇಕಿದ್ದ ವಿದ್ಯಾರ್ಥಿನಿ ಉಮೈ ಖುಲ್ಸುಂ (16) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಜಂಬರಘಟ್ಟ ಗ್ರಾಮದ ಉಮೈ, ಸೋಮವಾರ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಹಾಜರಾಗಲು ಶಿವಮೊಗ್ಗದ ಸಂಬಂಧಿಕರ ಮನೆಗೆ ನಿನ್ನೆ ಸಂಜೆ ಹೊರಟಿದ್ದಳು.

ಮೂಡಲ ವಿಠಲಾಪುರದಲ್ಲಿ ಶಿವಮೊಗ್ಗಕ್ಕೆ ತೆರಳಲು ಬಸ್ ಹತ್ತಲೆಂದು ರಸ್ತೆ ದಾಟುವಾಗ ಚನ್ನಗಿರಿ ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಬಾಲಕಿ ಸ್ಥಳದಲ್ಲೇಮೃತಪಟ್ಟಿದ್ದಾಳೆ.
ಈ ಬಗ್ಗೆ ಹೊಳೆಹೊನ್ನೂರು #Holehonnur ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















