ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಭದ್ರಾವತಿ ಹಾಗೂ ಸೊರಬ ತಾಲೂಕುಗಳಲ್ಲಿ ಪರವಾನಗಿ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಲಾಗಿದೆ.
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಪರವಾನಗಿಯಿಲ್ಲದೇ ಸಾಗಿಸುತ್ತಿದ್bದ ಮಲ್ನಾಡ್ ಗಿಡ್ಡ ತಳಿಯ ನಾಲ್ಕು ಗೋವುಗಳನ್ನು ರಕ್ಷಣೆ ಮಾಡಲಾಗಿದೆ.
Also read: ಡಿವೈಡರ್ ಗೆ ಡಿಕ್ಕಿ ಹೊಡೆದು 10 ಪಲ್ಟಿಯಾದ ಕಾರು | ಮೂವರು ಸಾವು
ಇದೇ ವೇಳೆ, ಸೊರಬ ಠಾಣಾ ವ್ಯಾಪ್ತಿಯಲ್ಲೂ ಸಹ ಪಿಕಪ್ ವಾಹನದಲ್ಲಿ ಯಾವುದೇ ಪರವಾನಗಿಯಿಲ್ಲದೇ ಮಲ್ನಾಡ್ ಗಿಡ್ಡ ತಳಿಯ ನಾಲ್ಕು ಗೋವುಗಳನ್ನು ರಕ್ಷಣೆ ಮಾಡಲಾಗಿದೆ.
ಎರಡೂ ತಾಲೂಕುಗಳಲ್ಲಿ ರಕ್ಷಣೆ ಮಾಡಲಾದ ಗೋವುಗಳನ್ನು ಗೋಶಾಲೆಗೆ ಬಿಡಲಾಗಿದೆ.
ಗೋ ರಕ್ಷಣೆಯನ್ನು ಸತತ ಕಾರ್ಯನಿರತವಾಗಿರುವ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಖಚಿತ ಮಾಹಿತಿಯ ಆಧಾರದಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post