ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಭದ್ರಾವತಿ |
ಮಹತ್ವದ ಬೆಳವಣಿಗೆಯಲ್ಲಿ ಜೂನ್ 20ರ ನಾಳೆ ಭಾನುವಾರ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ನಗರಕ್ಕೆ ಭೇಟಿ ನೀಡಲಿದ್ದು, ವಿಐಎಸ್’ಎಲ್ ಕಾರ್ಖಾನೆ ವೀಕ್ಷಿಸಲಿದ್ದಾರೆ.
ನಾಳೆ ಮುಂಜಾನೆ 7 ಗಂಟೆಗೆ ನವದೆಹಲಿಯಿಂದ ವಿಮಾನದಲ್ಲಿ ಹೊರಟು ಮಧ್ಯಾಹ್ನ 12.15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಅಲ್ಲಿಂದ 12.30ಕ್ಕೆ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 1.30ಕ್ಕು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಸ್ಥಾವರಕ್ಕೆ(ವಿಐಎಸ್’ಎಲ್) ಭೇಟಿ ನೀಡಲಿದ್ದಾರೆ.
ಆನಂತರ ವಿಐಎಎಸ್’ಎಲ್ ಕಾರ್ಮಿಕರು, ಸಿಬ್ಬಂದಿಗಳೊAದಿಗೆ ಮಾತುಕತೆ ನಡೆಸಲಿರುವ ಅವರು, ನಂತರ ಕಾರ್ಖಾನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ರಸ್ತೆ ಮಾರ್ಗವಾಗಿ ಹೊರಟು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಲುಪಿ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣ ತಲುಪಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ದಿನವೇ ಭದ್ರಾವತಿಯ ವಿಐಎಸ್’ಎಲ್ ಕಾರ್ಖಾನೆಯ ಸ್ಥಿತಿಗತಿ ಕುರಿತಾಗಿ ಸಂಪೂರ್ಣ ವರದಿ ನೀಡುವಂತೆ ಎಸ್’ಎಐಎಲ್ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದಾಗಿ ಒಂದು ತಿಂಗಳಲ್ಲೇ ಕಾರ್ಖಾನೆಗೆ ಭೇಟಿ ನೀಡುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















