ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸದನದಲ್ಲಿ ಅಂಗಿ ಬಿಚ್ಚಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮವನ್ನು ವಿರೋಧಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ಕಾರ್ಯಕರ್ತರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ತಮ್ಮ ಅಳಲನ್ನು ಹೇಳಿಕೊಳ್ಳಲು ಮುಂದಾದ ಸಂಗಮೇಶ್ವರ ಅವರನ್ನು ಕಲಾಪದಿಂದ ಅಮಾನತುಗೊಳಿಸಿರುವ ಕ್ರಮ ಸರಿಯಲ್ಲ. ರಾಜ್ಯಪಾಲರು, ಶಾಸಕರಿಗೆ ಇರುವ ಪ್ರಜಾಸತ್ತಾತ್ಮಕ ಹಕ್ಕನ್ನು ಉಳಿಸಿಕೊಡಬೇಕು. ಅವರ ಅಮಾನತ್ತನ್ನು ರದ್ದುಪಡಿಸಬೇಕು ಹಾಗೂ ಭದ್ರಾವತಿ ಠಾಣೆಯಲ್ಲಿ ಶಾಸಕರ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿರುವ ದೂರನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರೊ. ಕಬಡ್ಡಿ ಪಂದ್ಯಾವಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆತ್ಮ ರಕ್ಷಣೆಗಾಗಿ ಪ್ರತಿ ಹಲ್ಲೆ ನಡೆಸಿದ್ದಾರೆ. ಆದರೆ ಬಿಜೆಪಿ ತಮ್ಮ ಪ್ರಭಾವ ಬೀರಿ ಶಾಸಕ ಸಂಗಮೇಶ್ವರ್ ಅವರ ಬೆಂಬಲಿಗರು ಹಾಗೂ ಕುಟುಂಬಸ್ಥರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದು ಖಂಡನೀಯ ಎಂದು ಎನ್‌ಎಸ್‌ಯುಐ ಮುಖಂಡರು ಕಿಡಿ ಕಾರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post