ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್(70) ಅವರ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಸಂತಾಪ ಸೂಚಿಸಿದ್ದಾರೆ.
ಭಾನುಪ್ರಕಾಶ್ #Bhanuprakash ಅವರು ತೀವ್ರ ಹೃದಯಾಘಾತದಿಂದ ದೈವಾದೀನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಅಪಾರ ಶಿಷ್ಯ ವೃಂದಕ್ಕೆ ಅವರ ಅಗಲಿಕೆಯಿಂದ ದುಃಖವಾಗಿದೆ. ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರು, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರು, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾಗಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಪಕ್ಷವನ್ನು ಶಿಸ್ತು ಬದ್ಧವಾಗಿ ಸಂಘಟಿಸುವಲ್ಲಿ ಅವಿರತ ಶ್ರಮಿಸಿದ ಪ್ರಮುಖರು, ಮಾಜಿ ವಿಧಾನ ಪರಿಷತ್ ಸದಸ್ಯರು, ನನ್ನ ರಾಜಕೀಯ ಮಾರ್ಗದರ್ಶಕರಾಗಿ ಸೂಕ್ತ ಸಮಯದಲ್ಲಿ ಅಪಾರ ಸಲಹೆ ನೀಡಿ ಹರಸುತ್ತಿದ್ದರು.
Also read: ಸಾಗರ: ಗಾಂಜಾ ಮಾರುತ್ತಿದ್ದ ಮೂವರ ಮಾಲು ಸಹಿತ ಬಂಧನ
ಅವರ ಅತ್ಮಕ್ಕೆ ಭಗವಂತ ಸದ್ಗತಿ ನೀಡಲಿ, ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯದುಃಖ ಸಹಿಸುವ ಶಕ್ತಿ ಕೊಡಲಿ ಎಂದು ರಾಘವೇಂದ್ರ ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post