ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿನ್ನೆ ಹೃದಯಾಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ ಬಿಜೆಪಿ ಹಿರಿಯ ಮುಖಂಡ, ಮಾಜಿ ಎಂಎಲ್’ಸಿ ಎಂ.ಬಿ. ಭಾನುಪ್ರಕಾಶ್ #M B Bhanuprakash ಅವರ ಅಂತ್ಯಕ್ರಿಯೆ ನಿನ್ನೆ ಸಂಜೆ ನಡೆಯಿತು. ಈ ಮೂಲಕ ಸಭ್ಯ ರಾಜಕಾರಣಿಯ ದೇಹ ಪಂಚಭೂತಗಳಲ್ಲಿ ಲೀನವಾಯಿತು.
ಕಾಂಗ್ರೆಸ್ ಸರ್ಕಾರದ ವಿರುದ್ಧ ನಿನ್ನೆ ನಡೆದ ಪ್ರತಿಭಟನೆ ನಂತರ ತೀವ್ರ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದ ಭಾನುಪ್ರಕಾಶ್ ಅವರ ಅಂತ್ಯಕ್ರಿಯೆ ಮತ್ತೂರಿನಲ್ಲಿ ತುಂಗಾ ನದಿಯ ತಟದಲ್ಲಿ ಅಂತ್ಯಸAಸ್ಕಾರ ನೆರವೇರಿಸಲಾಯಿತು.

Also read: ಜೂನ್ 24-26 | ಶಿವಮೊಗ್ಗಕ್ಕೆ ಶೃಂಗೇರಿ ಶ್ರೀಗಳ ಭೇಟಿ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
ಅಂತ್ಯಕ್ರಿಯೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ಪ್ರಮುಖರಾದ ಸುನೀಲ್ ಕುಮಾರ್, ಆರಗ ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ಅಂತಿಮ ನಮನ ಸಲ್ಲಿಸಿದರು.

ಇನ್ನು, ನಿನ್ನೆ ನಿಧನರಾದ ಭಾನುಪ್ರಕಾಶ್ ಅವರ ನೇತ್ರಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆಯಲಾಗಿದೆ. ಶಂಕರ ಕಣ್ಣಿನ ಆಸ್ಪತ್ರೆಗೆ ಭಾನುಪ್ರಕಾಶ್ ಅವರ ನೇತ್ರಗಳನ್ನು ದಾನ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post