ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಪಿಇಎಸ್ ಕಾಲೇಜ್ ಮುಂಭಾಗ ಶಕ್ತಿಧಾಮದಲ್ಲಿ ನಿರ್ಮಿಸಲಾಗುತ್ತಿರುವ “ಆರೋಗ್ಯ ಭವನ” ನೂತನ ಕಟ್ಟಡದ ಭೂಮಿ ಪೂಜೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ, Araga Gnanendra ಸಂಸದ ಬಿ. ವೈ ರಾಘವೇಂದ್ರ MP Raghavendra ಅವರೊಂದಿಗೆ ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ D S Arun ನೆರವೇರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಸಿದ್ಧನಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರುಗಿಹಳ್ಳಿ, ಡಾ. ನಾಗರಾಜ್ ನಾಯ್ಕ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಜಿಲ್ಲಾ ಶಾಖೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















