ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯ ಚುನಾವಣಾ ಆಯೋಗವು 7 ನಗರಸಭೆ, 3 ಪುರಸಭೆ ಹಾಗೂ 2 ಪಟ್ಟಣ ಪಂಚಾಯಿತಿಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಾರ್ವತ್ರಿಕ ಚುನಾವಣೆ ನಡೆಸಲು ಆದೇಶಿಸಿದೆ. ಇದರಿಂದ ತೀರ್ಥಹಳ್ಳಿ ತಾಲೂಕಿನ ಪಟ್ಟಣ ಪಂಚಾಯತ್ ಚುನಾವಣೆಗೆ ಮುಹೂರ್ತ ನಿಗದಿಯಾದಂತಾಗಿದೆ.
ಜಿಲಾಧಿಕಾರಿಗಳು ಚುನಾವಣೆ ಅಧಿಸೂಚನೆ ಹೊರಡಿಸುವ ದಿನಾಂಕ ಏಪ್ರಿಲ್ 8 ಹಾಗೂ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 15 ಕೊನೆಯ ದಿನವಾಗಿದೆ.
ಚುನಾವಣಾ ಆಯೋಗದ ಆದೇಶದಂತೆ ಏಪ್ರಿಲ್ 27 ಮತದಾನ ನಡೆಯಲಿದ್ದು, ಏಪ್ರಿಲ್ 30ರಂದು ತಾಲೂಕಿನ ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















