ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ರಾತ್ರಿ 8.30ರ ವೇಳೆ ಗ್ಯಾಸ್ ಲೀಕ್ ಆಗಿದೆ ಎಂದು ಹೇಳಲಾಗಿದ್ದು, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ ಎಂದು ವರದಿಯಾಗಿದೆ.
ಮೆಗ್ಗಾನ್ ಆಸ್ಪತ್ರೆಯ ಮೊದಲ ಮಹಡಿಯಲ್ಲಿರುವ ಕೋವಿಡ್ ವಾರ್ಡ್ ನಂ.9ರಲ್ಲಿ ಗ್ಯಾಸ್ ಸೋರಿಕೆಯಾಗಿದೆ ಎಂದು ಹೇಳಲಾಗಿದೆ. ತತಕ್ಷಣವೇ ರೋಗಿಗಳು ವಾರ್ಡ್‌ನಿಂದ ಹೊರಕ್ಕೆ ಓಡಿ ಬಂದಿದ್ದಾರೆ. ಆದರೆ, ವಿಷಯ ತಿಳಿದ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ ಸಂಭವನೀಯ ತೊಂದರೆಯನ್ನು ತಪ್ಪಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ವಿಚಾರವನ್ನು ಅಧಿಕೃತ ಮೂಲಗಳು ಇನ್ನೂ ಖಚಿತಪಡಿಸಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post