No Result
View All Result
AN-32 of IAF has met with an accident in Assam
English Articles

IAF Aircraft Crashes During Landing at Jorhat Airbase in Assam

by ಕಲ್ಪ ನ್ಯೂಸ್
June 13, 2026
0

Kalpa Media House  |  Assam  | An Indian Air Force (IAF) Antonov An-32 transport aircraft crashed while attempting to land...

Read moreDetails
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಣೆಬೆನ್ನೂರಿನಿಂದ ಬೈಂದೂರಿನವರೆಗೆ ರಸ್ತೆ ಕಾಮಗಾರಿ ಶೀಘ್ರ ಆರಂಭ: ಸಂಸದ ರಾಘವೇಂದ್ರ

ಕೃಷಿ ವಿವಿ ಅಂತರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಲಿದೆ: ಬಿವೈಆರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 26, 2022
in ಶಿವಮೊಗ್ಗ
0
ರಾಣೆಬೆನ್ನೂರಿನಿಂದ ಬೈಂದೂರಿನವರೆಗೆ ರಸ್ತೆ ಕಾಮಗಾರಿ ಶೀಘ್ರ ಆರಂಭ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಅಂತರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾಲಯವಾಗಿ ಹೊರಹೊಮ್ಮುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ನಿಟ್ಟಿನಲ್ಲಿ ಕೃಷಿ ವಿದ್ಯಾರ್ಥಿಗಳು ರೈತರ ಏಳ್ಗೆ ಮತ್ತು ಹಿತಕ್ಕಾಗಿ ತಮ್ಮ ಅಧ್ಯಯನ ನಡೆಸಬೇಕೆಂದು ಸಂಸದರಾದ ಬಿ.ವೈ. ರಾಘವೇಂದ್ರ ಹೇಳಿದರು.

ಇಂದು ಇರುವಕ್ಕಿ ಮುಖ್ಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 10 ನೇ ಸಂಸ್ಥಾಪನಾ ದಿನಾಚರಣೆ(ದಶಮಾನೋತ್ಸವ)ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಅಭಿವೃದ್ದಿ ಮತ್ತು ರೈತರ ಕಲ್ಯಾಣ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಎರಡನ್ನು ಸಾಧಿಸುವ ಉದ್ದೇಶ ಹೊಂದಿರುವ ವಿಶ್ವವಿದ್ಯಾಲಯ, ದಶಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಇಲ್ಲಿನ ಸುತ್ತಮುತ್ತಲಿನ ರೈತರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ. ರೈತರು ಸೇರಿದಂತೆ ಸುಮಾರು 700 ಎಕರೆ ಜಮೀನನ್ನು ವಿವಿ ಗೆ ಬಿಟ್ಟುಕೊಟ್ಟು ಸಹಕರಿಸಿದ ಎಲ್ಲರಿಗೆ ಧನ್ಯವಾದಗಳು ಎಂದರು.

ವಿವಿಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಅಧ್ಯಯನಕ್ಕೆ ಎಲ್ಲ ರೀತಿಯ ವ್ಯವಸ್ಥೆ ಆಗಿದೆ. ಸುಮಾರು ಒಂದು ಸಾವಿರ ವಿದ್ಯಾರ್ಥಿಗಳಿಗೆ ಸಾಕಾಗುವಷ್ಟು ಮೂಲಭೂತ ಸೌಕರ್ಯ ಈಗಾಗಲೇ ಇದ್ದು ಬೆಳೆ ಅಭಿವೃದ್ದಿ, ಜೈವಿಕ ತಂತ್ರಜ್ಞಾನ, ತೋಟಗಾರಿಕೆ, ಅರಣ್ಯೀಕರಣ ಸೇರಿದಂತೆ ವಿವಿಧ ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಗಳ ಸಂಶೋಧನಾ ಕೇಂದ್ರ ಆಗಿದೆ. ಶೈಕ್ಷಣಿಕ ಬ್ಲಾಕ್, ವಿದ್ಯಾರ್ಥಿನಿಲಯ ಹೀಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳ ಅಭಿವೃದ್ದಿಯಾಗುತ್ತಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿ ಬೆಳೆಯಲಿದೆ. ಈ ದಿಕ್ಕಿನಲ್ಲಿ ನಮ್ಮ ಮುಖ್ಯಮಂತ್ರಿಗಳು ಸಹ ನಮ್ಮ ಕೈಹಿಡಿಯಲಿದ್ದಾರೆ.
ವಿಶ್ವವಿದ್ಯಾಲಯದ ಮುಂದೆಯೇ ಇರುವ ರಾಜ್ಯ ಹೆದ್ದಾರಿಯು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಮಂಜೂರಾತಿ ದೊರೆತಿದ್ದು ರೂ.450 ಕೋಟಿ ಮೊದಲನೇ ಹಂತದ ಅನುದಾನ ಶೀಘ್ರದಲ್ಲಿ ಬಿಡುಗಡೆಯಾಗಿ ರಾಣೆಬೆನ್ನೂರಿನಿಂದ ಬೈಂದೂರಿನವರೆಗೆ ರಸ್ತೆ ಕಾಮಗಾರಿ ಶುರುವಾಗಲಿದೆ. ರಾಷ್ಟ್ರೀಯ ಹೆದ್ದಾರಿ ವಿವಿ ಮುಂದೆ ಹಾದು ಹೋಗುವುದರಿಂದ ಇಲ್ಲಿ ಹೆಚ್ಚು ಅಭಿವೃದ್ದಿ ಕಾಣಬಹುದು ಎಂದರು.

ರೂ.313 ಕೋಟಿ ವೆಚ್ಚದಲ್ಲಿ ಹೊಸನಗರದಿಂದ ಮಾವಿನಕೊಪ್ಪ ವಯಾ ಕೊಲ್ಲೂರಿಗೆ ರಸ್ತೆ ಮಂಜೂರಾಗಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು. ಈ ರಸ್ತೆಯಿಂದಾಗಿ ಕೊಲ್ಲೂರನ್ನು ಅತಿ ಕಡಿಮೆ ಅವಧಿಯಲ್ಲಿ ತಲುಪಲು ಅನುಕೂಲವಾಗಲಿದೆ. ಯಡೆಹಳ್ಳಿಯಲ್ಲಿ ರೂ.40 ಕೋಟಿ ವೆಚ್ಚದಲ್ಲಿ ರಿಂಗ್ ರಸ್ತೆ ನಿರ್ಮಾಣ ಆಗಲಿದೆ. ಇದೆಲ್ಲದರಿಂದ ವಿಶ್ವವಿದ್ಯಾಲಯದ ಮೌಲ್ಯವರ್ಧನೆಯಾಗಲಿದೆ. ಖೇಲೋ ಇಂಡಿಯಾ ಸ್ಟೇಡಿಯಂ ನಿರ್ಮಿಸಲು ರಾಜ್ಯದಿಂದ ಈಗಾಗಲೇ ರೂ.40 ಕೋಟಿ ಮೀಸಲಿಡಲಾಗಿದ್ದು ಕೇಂದ್ರದಿಂದ ರೂ.40 ಕೋಟಿ ಮಂಜೂರಾತಿ ದೊರೆತ ನಂತರ ನವುಲೆ ಕೃಷಿ ಕಾಲೇಜು ಬಳಿ ಸ್ಟೇಡಿಯಂ ನಿರ್ಮಿಸಲಾಗುವುದು ಇದರಿಂದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಪ್ರಸ್ತುತ ತಿನ್ನುವ ಅನ್ನ ಮತ್ತು ಭೂಮಿ ವಿಷವಾಗಿ ಪರಿಣಮಿಸುತ್ತಿದೆ. ಕೀಟನಾಶಗಳಂತಹ ರಾಸಾಯನಿಕ ಬಳಕೆ ಹೆಚ್ಚುತ್ತಿದೆ. ಗೊಬ್ಬರ ಬಳಕೆ ಹೆಚ್ಚುತ್ತಿದೆ. ಇದನ್ನು ಕಡಿಮೆ ಮಾಡುವ ರೀತಿಯಲ್ಲಿ ಮತ್ತು ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆಗಳನ್ನು ನಡೆಸಬೇಕು. ಜೈವಿಕ ತಂತ್ರಜ್ಞಾನ ಮತ್ತು ರೈತಸ್ನೇಹಿಯಾದ ತಂತ್ರಜ್ಞಾನಗಳನ್ನು ಅಭಿವೃದ್ದಿಪಡಿಸಿ ಸದಾ ನಮ್ಮ ಕಾಯುವ ರೈತರಿಗೆ ಕೊಡುಗೆಯಾಗಿ ನೀಡಬೇಕು ಎಂದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ರೈತರ ಏಳ್ಗೆಗಾಗಿ ಅನೇಕ ಯೋಜನೆ, ಕಾರ್ಯಕ್ರಮಗಳು, ಮತ್ತು ಸಬ್ಸಿಡಿಗಳು ಜಾರಿಯಲ್ಲಿವೆ. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ಸುಮಾರು 13 ಕೋಟಿ ರೈತರ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಎರಡು ತಿಂಗಳಿಗೊಮ್ಮೆ ರೂ.2 ಸಾವಿರ ಹಣ ಜಮೆಯಾಗುತ್ತಿದೆ ಎಂದರು. ಹೀಗೆ ರೈತರು ಸ್ವಾಭಿಮಾನದಿಂದ ಬದುಕಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ವಿದ್ಯಾರ್ಥಿಗಳೂ ಈ ನಿಟ್ಟಿನಲ್ಲಿ ಶ್ರಮ ವಹಿಸಬೇಕೆಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆನಂದಪುರ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು.

ವಿಶ್ವವಿದ್ಯಾಲಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ, ಅತ್ಯುತ್ತಮ ಸೇವಾ ಸಿಬ್ಬಂದಿ ಪ್ರಶಸ್ತಿಗಳನ್ನು ವಿತರಿಸಲಾಯಿತು. ಕುಲಸಚಿವರಾದ ಡಾ.ಆರ್.ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೊರಬ ಪ್ರಗತಿಪರ ರೈತರಾದ ದೊಡ್ಡಗೌಡ.ಸಿ.ಪಾಟೀಲ್, ಚನ್ನಗಿರಿ ಪ್ರಗತಿಪರ ರೈತರಾದ ಕೆ.ನಾಗರಾಜ್, ಶಿವಮೊಗ್ಗದ ಪ್ರಗತಿಪರ ರೈತರಾದ ವೀರಭದ್ರಪ್ಪ ಪೂಜಾರಿ, ಕೆ.ಶಿ.ನಾ.ಕೃ.ತೋ.ವಿ.ವಿ.ವಿ ಡೀನ್ ಡಾ.ಎಂ.ದಿನೇಶ್ ಕುಮಾರ್, ಡಾ. ಕುಶಾಲಪ್ಪ, ಡಾ.ಮಂಜಪ್ಪ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Agricultural UniversityB Y RaghavendrabyndoorKannada News WebsiteLatest News KannadaLocal NewsMalnad NewsRanebennurShimogaShivamoggaShivamogga Newsಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಬಿ.ವೈ. ರಾಘವೇಂದ್ರಬೈಂದೂರುರಾಣೆಬೆನ್ನೂರುಶಿವಮೊಗ್ಗ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವದ ಆರೋಗ್ಯ ಕಾಪಾಡುವಲ್ಲಿ ಫಾರ್ಮಸಿಸ್ಟ್ ಪಾತ್ರ ಪ್ರಮುಖ: ಎಸ್.ಎನ್. ನಾಗರಾಜ

Next Post

ಗಮನಿಸಿ! ಸೆ.28ರಂದು ಕುಂಸಿ ಸೇರಿದಂತೆ ಈ ಗ್ರಾಮೀಣ ಭಾಗಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಗಮನಿಸಿ! ಸೆ.28ರಂದು ಕುಂಸಿ ಸೇರಿದಂತೆ ಈ ಗ್ರಾಮೀಣ ಭಾಗಗಳಲ್ಲಿ ಕರೆಂಟ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
India Face Afghanistan in 1st ODI

1ನೇ ಏಕದಿನ ಪಂದ್ಯ | ಅಫ್ಗಾನಿಸ್ತಾನ ವಿರುದ್ಧ ಭಾರತಕ್ಕೆ ಮಹತ್ವದ ಪರೀಕ್ಷೆ

June 13, 2026
ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
AN-32 of IAF has met with an accident in Assam

ಅಸ್ಸಾಂ | ವಾಯುನೆಲೆಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡ ವಾಯುಸೇನೆ ವಿಮಾನ

June 13, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL