ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಣೇಶ ಹಬ್ಬ Ganesha Chaturthi ಹಾಗೂ ಈದ್ ಮಿಲಾದ್ Eid-Milad ಆಚರಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆ.18ರಿಂದ ಅ.1ರವರೆಗೂ ಬೈಕ್ ರ‍್ಯಾಲಿಗಳನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DCSelvamani ಅವರು ಆದೇಶ ಹೊರಡಿಸಿದ್ದು, ಸೆ.18ರಂದು ಗಣಪತಿ ಹಬ್ಬ ಆಚರಣೆ ಮಾಡಲಾಗುತ್ತಿದೆ. ಸೆ.28ರಿಂದ 30ರವರೆಗೂ ಈದ್ ಮಿಲಾದ್ ಹಬ್ಬ ಆಚರಣೆ ನಡೆಯಲಿದೆ. ಹೀಗಾಗಿ, ಈ ನಿರ್ಧಾರ ಕೈಗೊಳ್ಳಲಾಗಿದೆ.
Also read: ಗಮನಿಸಿ! ಶಿವಮೊಗ್ಗ ಜಿಲ್ಲೆಯಾದ್ಯಂತ ಅ.1ರವರೆಗೂ ಬೈಕ್ ರ‍್ಯಾಲಿ ನಿಷೇಧ: ಕಾರಣವೇನು?
ಜಿಲ್ಲೆಯು ಸೂಕ್ಷ್ಮತೆಯಿಂದ ಕೂಡಿರುವ ಪ್ರದೇಶವಾಗಿರುವುದರಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಆಧಾರದಲ್ಲಿ ಜಿಲ್ಲೆಯಾದ್ಯಂತ ಕಾನೂನು, ಸುವ್ಯವಸ್ಥೆ, ಸೌಹಾರ್ಧತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ.17ರಿಂದ ಅ.1ರವರೆಗೂ ಜಿಲ್ಲೆಯಾದ್ಯಂತ ಬೈಕ್ ರ‍್ಯಾಲಿ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post