ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸಿಟಿ ಸೆಂಟರ್‌ನಲ್ಲಿ ದ್ವಿಚಕ್ರ ವಾಹನದ ಬಿಡಿಭಾಗಗಳು ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪಾರ್ಕಿಂಗ್ ಜಾಗದಲ್ಲಿ ಬೈಕ್ ನಿಲ್ಲಿಸಿ ಮಾಲ್ ಒಳಗಡೆ ಹೋಗಿದ್ದ ಸಂದರ್ಭದಲ್ಲಿ ಬೈಕ್‌ನ ಬಿಡಿ ಭಾಗಗಳನ್ನು ಇಬ್ಬರು ವ್ಯಕ್ತಿಗಳು ಕದ್ದಿದ್ದಾರೆ. ದ್ವಿಚಕ್ರ ವಾಹನ ಪಾರ್ಕ್ ಮಾಡಲು ಪ್ರತಿ ಘಂಟೆಗೆ 20ರೂ. ವಸೂಲಿ ಮಾಡುತ್ತಾರೆ. ಆದರೆ ಘಟನೆ ಬಗ್ಗೆ ಕೇಳಿದರೆ ಇಲ್ಲಿನ ಸಿಬ್ಬಂದಿಗಳು ಸರಿಯಾಗಿ ಉತ್ತರ ನೀಡುವುದಿಲ್ಲ ಎಂಬ ಆರೋಪಿಸಲಾಗಿದೆ.
ಪೋಲಿಸ್ ಇಲಾಖೆ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ. ಅಪರಾಧಿಗಳನ್ನು ಪತ್ತೆ ಹಚ್ಚಿ, ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post