ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ತಮಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP B Y Raghavendra ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಚುನಾವಣಾ ಕಣ ರಂಗೇರುತ್ತಿದೆ. ಎಲ್ಲಾ ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಬಿಜೆಪಿ ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುತ್ತಿಲ್ಲ. ಐದು ವರ್ಷಗಳ ಕಾರ್ಯಕರ್ತರ ಪರಿಶ್ರಮ ಈಗ ತುಲನೆ ಆಗುತ್ತದೆ. ಜನತೆ ಬಿಜೆಪಿ ಪರವಾಗಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸರ್ಕಾರದ ಅಭಿವೃದ್ಧಿ ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತಿದ್ದೇವೆ. ಡಬಲ್ ಇಂಜಿನ್ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸುತ್ತೇವೆ. ಬೈಂದೂರು ಸಹಿತ ಶಿವಮೊಗ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರ ಗೆಲ್ಲುತ್ತೇವೆ. ಭದ್ರಾವತಿಯಲ್ಲೂ ಈ ಬಾರಿ ಗೆಲ್ಲುವುದು ಶತಃಸಿದ್ಧ. ಯಾವುದೇ ಆಪರೇಷನ್ ಇಲ್ಲದೆ ಪೂರ್ಣ ಬಹುಮತ ಬರುತ್ತದೆ. ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯಿಂದ ಟಿಕೆಟ್ ಸಿಗದೇ ಮುನಿಸಿಕೊಂಡು ಪಕ್ಷ ಬಿಡುತ್ತಿರುವ ವಿಚಾರ ಸಂಬಂಧ ಪ್ರತಿಸಿದ ರಾಘವೇಂದ್ರ, ಟಿಕೆಟ್ ಸಿಗದಿದ್ದಾಗ ಸಹಜವಾಗಿ ಒಂದೆರಡು ಕಡೆ ಅಸಮಾಧಾನ ಇದ್ದೇ ಇರುತ್ತದೆ. ನಮ್ಮ ನಾಯಕರು ಅವರನ್ನು ಮನವೊಲಿಸುವ ಕಾರ್ಯ ಮಾಡುತ್ತಾರೆ. ಎಲ್ಲವೂ ತಿಳಿಯಾಗಿ ಒಳ್ಳೆಯ ವಾತಾವರಣ ನಿರ್ಮಾಣ ಆಗುತ್ತದೆ ಎಂಬ ವಿಶ್ವಾಸ ತಮಗಿದೆ. ಒಳ್ಳೆಯ ಕಾರ್ಯದಲ್ಲಿ ದೃಷ್ಟಿ ಬೀಳಬಾರದೆಂದು ಬೊಟ್ಟು ಇಡುತ್ತಾರೆ. ಅದೇ ರೀತಿ ಕೆಲ ಘಟನೆ ನಡೆಯುತ್ತೆ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಸರಿ ಹೋಗುತ್ತದೆ. ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.





















