ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಒಂದು ವಾರದಿಂದ ಭದ್ರಾವತಿ ನಗರಸಭೆ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮೇಘರಾಜ್ ಅವರಿಗೆ ತೀವ್ರ ಆಯಾಸ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೊವೀಡ್ ಪರೀಕ್ಷೆ ಮಾಡಿಸಿಕೊಂಡಾಗ ಪಾಸಿಟಿವ್ ವರದಿ ಬಂದಿದೆ.
ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮೆಗ್ಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸಂಪೂರ್ಣ ಸ್ಥಿರವಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















