No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಾಮಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ವಿಶೇಷ ಆದ್ಯತೆ ನೀಡಿದೆ: ಡಿ.ಎಸ್. ಅರುಣ್

ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕನಾಯ್ಕ ಅವರಿಂದ ಟೆಂಪಲ್ ರನ್: ವಿವಿಧ ದೇವಸ್ಥಾನಗಳಿಗೆ ಭೇಟಿ

kalpa News by kalpa News
April 16, 2023
in ಶಿವಮೊಗ್ಗ
0
ಗ್ರಾಮಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ವಿಶೇಷ ಆದ್ಯತೆ ನೀಡಿದೆ: ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಡಬಲ್ ಇಂಜಿನ್ ಸರ್ಕಾರದ ವಿಶೇಷ ಯೋಜನೆಗಳಿಂದ ರಾಜ್ಯದ ಎಲ್ಲ ಗ್ರಾಮಗಳ ಸಬಲೀಕರಣ ಆಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಗ್ರಾಮಾಂತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಹಾಶಕ್ತಿ ಕೇಂದ್ರಗಳ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಆರ್ಥಿಕವಾಗಿ ಬಲಿಷ್ಠವಾಗಿದ್ದು, ಮೋದಿ ಅವರು ಗ್ರಾಮಗಳ ಸಬಲೀಕರಣಕ್ಕೆ ಪ್ರಾಮುಖ್ಯತೆ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಗ್ರಾಮ ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿದೆ ಎಂದು ತಿಳಿಸಿದರು.
ಪಂಚಾಯಿತಿ ವ್ಯವಸ್ಥೆ ಸದೃಢಗೊಳಿಸುವಲ್ಲಿ ಬಿಜೆಪಿ ಹೆಚ್ಚಿನ ಒತ್ತು ನೀಡುತ್ತಿದ್ದು, ಗ್ರಾಮ ಸದಸ್ಯರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಂದಾಗಿದೆ. ಗ್ರಾಮ ಮಟ್ಟದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಗ್ರಾಮದ ಮನೆ ಮನೆಗಳಿಗೂ ತಲುಪಿಸುವ ಕೆಲಸ ಆಗಬೇಕು ಎಂದರು.

Also read: ಶಿವಮೊಗ್ಗ ಕೈ ಪಾಳಯದಲ್ಲಿ ಭಿನ್ನಮತ ಸ್ಪೋಟ! ಬಂಡಾಯದ ಬಾವುಟ ಹಾರಿಸಲಿದ್ದಾರೆಯೇ ಅತೃಪ್ತ ನಾಯಕರು?

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಮಾತನಾಡಿ, ಐದು ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಪರಿಣಾಮ ಬಿಜೆಪಿಗೆ ಹೆಚ್ಚಿನ ಜನಬೆಂಬಲ ವ್ಯಕ್ತವಾಗುತ್ತಿದೆ. ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಏ. 18ರ ಮಂಗಳವಾರ ನಾಮಪತ್ರ ಸಲ್ಲಿಸುತ್ತಿದ್ದು, ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ಹೇಳಿದರು.
ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ಧಿಗೆ ವಿಶೇಷ ಪ್ರಾಮುಖ್ಯತೆ ನೀಡಿದ್ದು, ಕೋಟ್ಯಾಂತರ ರೂ.ಗಳ ಅನುದಾನದಲ್ಲಿ ಯೋಜನೆಗಳ ಅನುಷ್ಠಾನ ಮಾಡಿದೆ. ವಿಮಾನ ನಿಲ್ದಾಣ, ರಸ್ತೆ, ರೈಲ್ವೇ ಸಾರಿಗೆ ಸಂಪರ್ಕ ವ್ಯವಸ್ಥೆ ಸದೃಢಗೊಳಿಸಿದೆ ಎಂದು ತಿಳಿಸಿದರು.

ಮಂಡಲ ಅಧ್ಯಕ್ಷ ರತ್ನಾಕರ ಶೆಣೈ ಮಾತನಾಡಿ, ಕೆ.ಬಿ.ಅಶೋಕ ನಾಯ್ಕ ಅವರು ಶಾಸಕರಾಗಿ ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ಪ್ರತಿಯೊಂದು ಗ್ರಾಮದ ಮನೆ ಮನೆಗಳಿಗೂ ತಲುಪಿಸುವ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಮತ್ತೊಮ್ಮೆ ಗೆಲ್ಲಿಸಲು ಎಲ್ಲರೂ ಶ್ರಮಿಸಬೇಕು. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎಂದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಮಹಾಶಕ್ತಿ ಕೇಂದ್ರಗಳ ಗ್ರಾಮ ಪಂಚಾಯಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.
Kalahamsa Infotech private limitedಕುಂಸಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಲೇಶಂಕರ ಗ್ರಾಮದ ಶ್ರೀ ಮಲೇಶಂಕರ ಸ್ವಾಮಿಯ ರಥೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಪಾಲ್ಗೊಂಡು ದೇವರ ದರ್ಶನ ಪಡೆದರು. ಆನವೇರಿ ಗ್ರಾಮದಲ್ಲಿ ಪಕ್ಷದ ಮುಖಂಡರ ಮನೆಗಳಿಗೆ ಭೇಟಿ ನೀಡಿದರು.

ಭಾನುವಾರ ಬೆಳಗ್ಗೆಯಿಂದಲೇ ಗ್ರಾಮಾಂತರ ಪ್ರದೇಶದ ವಿವಿಧ ಭಾಗಗಳಲ್ಲಿ ಇರುವ ದೇವಸ್ಥಾನಗಳಿಗೆ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಭೇಟಿ ನೀಡಿದರು. ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಊರಗಡೂರು ಶಿವದುರ್ಗ ಶ್ರೀ ವಿನಾಯಕ ಸ್ವಾಮಿ, ನಿದಿಗೆ ಶ್ರೀ ಶನೈಶ್ಚರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು.

ಮಂಡಲ ಅಧ್ಯಕ್ಷ ಮಂಜುನಾಥ್ ಕಲ್ಲಜ್ಜನಾಳ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಗೋಪಾಲ್, ಗಿರೀಶ್, ಹೊಳೆಹೊನ್ನೂರು ಮಂಡಲ ಪ್ರಧಾನ ಕಾರ್ಯದರ್ಶಿ ಉಜ್ಜಿನಪ್ಪ, ಮಲ್ಲೇಶ್, ಷಡಾಕ್ಷರಪ್ಪ ಗೌಡ, ಜಗದೀಶ್ ಗೌಡ, ಮಂಜಣ್ಣ, ವಿರೇಶ್, ಶಿವಣ್ಣ, ದಾನಶೇಖರಪ್ಪ, ಹಾಲೇಶ್, ಚನ್ನಬಸಪ್ಪ, ರಂಗೋಜಿ ರಾವ್, ಸುರೇಶ್, ರುದ್ರೋಜಿರಾವ್, ರಮೇಶ್ ಭೈರನಕೊಪ್ಪ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಕೈ ಪಾಳಯದಲ್ಲಿ ಭಿನ್ನಮತ ಸ್ಪೋಟ! ಬಂಡಾಯದ ಬಾವುಟ ಹಾರಿಸಲಿದ್ದಾರೆಯೇ ಅತೃಪ್ತ ನಾಯಕರು ?

Next Post

ಯಾವುದೇ ಆಪರೇಷನ್ ಇಲ್ಲದೆ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಬಿವೈಆರ್

kalpa News

kalpa News

Next Post
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ಯಾವುದೇ ಆಪರೇಷನ್ ಇಲ್ಲದೆ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಬಿವೈಆರ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL