ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳೆದ ಬಾರಿ ಬಹುಮತದ ಸರ್ಕಾರ ಇರಲಿಲ್ಲ. ಈ ಬಾರಿ ಪೂರ್ಣ ಬಹುಮತದ ಸರ್ಕಾರ ರಚನೆಗೆ ಮತದಾರರು ಆಶೀರ್ವಾದ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ShobaKarndlaje ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡು ಆ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದರು. ಅವರನ್ನು ಸೇರಿಸಿಕೊಂಡು ಸರ್ಕಾರ ಮಾಡುವ ಹೊಣೆಗಾರಿಕೆ ಬಿಜೆಪಿಯದ್ದಾಗಿತ್ತು. ಆದರೆ ಈ ಬಾರಿ ಅಂತಹ ಸ್ಥಿತಿ ನಿರ್ಮಾಣ ಮಾಡದೆ ಬಿಜೆಪಿಗೆ ಬಹುಮತ ನೀಡುವಂತೆ ಹೇಳಿದರು.

ಕಳೆದ 9 ವರ್ಷಗಳಲ್ಲಿ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅಭಿವೃದ್ಧಿ ಮಾಡಲಾಗುತ್ತಿದೆ. ಅಭಿವೃದ್ಧಿ ಕೊಂಡಿ ಎಲ್ಲಿಯೂ ಸಡಿಲವಾಗಬಾರದು. ಹಿಂದೆ ಯೋಜನೆಗಳು 40 ವರ್ಷವಾದರೂ ಪೂರ್ಣವಾಗುತ್ತಿರಲಿಲ್ಲ. ಒಂದು ಯೋಜನೆಯ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗುತಿತ್ತು. ಆದರೆ ಈಗ ಆ ಸ್ಥಿತಿ ಇಲ್ಲ ಎಂದರು.

Also read: ಬೀದರ್: ಜಿನಿ ಜಿನಿ ಮಳೆಯ ನಡುವೆಯೂ ಜೆಡಿಎಸ್ ನಿಂದ ಅಬ್ಬರದ ಪ್ರಚಾರ
ಪ್ರಧಾನಿ ಮೋದಿಯವರು PM Modi ಈಗಾಗಲೇ ರಾಜ್ಯದಲ್ಲಿ ಪ್ರವಾಸ ಮಾಡಿದ್ದಾರೆ. ಇನ್ನು ಕೆಲವು ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ. ಕಾರ್ಯಕರ್ತರಲ್ಲಿ ಕಾರ್ಯಕರ್ತರಾಗಿ ಮೋದಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಪ್ರಧಾನಿಯವರನ್ನು ಅವಹೇಳನ ಮಾಡಿ ಮಾತನಾಡುತ್ತಿರುವುದು ಬೇಸರ ತರಿಸಿದೆ ಎಂದರು.












Discussion about this post