ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಉತ್ತರದ ವತಿಯಿಂದ ಚೋರಡಿಯಲ್ಲಿರುವ ಕುಮುದ್ವತಿ ಪ್ರೌಢಶಾಲೆಗೆ ವಿದ್ಯಾಸೇತು ಕಾರ್ಯಕ್ರಮದ ಅಡಿಯಲ್ಲಿ ಹತ್ತನೇ ತರಗತಿಯ ಅರವತ್ತು ವಿದ್ಯಾರ್ಥಿಗಳಿಗೆ ವಿದ್ಯಾಸೇತು ಸೇತುಬಂಧ ಪುಸ್ತಕಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಉತ್ತರದ ಅಧ್ಯಕ್ಷೆ ಶ್ರೀಮತಿ ಸುಧಾ ಪಾಂಡು, ಕಾರ್ಯದರ್ಶಿ ಶ್ರೀಮತಿ ಸುಜಾತ ಮಂಜುನಾಥ್ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು. ಹಾಗೆಯೇ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಅಧ್ಯಾಪಕ ವೃಂದ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post