No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪುಸ್ತಕಗಳು ಬದುಕಿನ ಯಶಸ್ಸಿಗೆ ರಹದಾರಿ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

ಹೆಚ್.ಎಸ್. ರುದ್ರಪ್ಪ ಪಿಯು ಕಾಲೇಜಿನ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 17, 2025
in ಶಿವಮೊಗ್ಗ
0
ಪುಸ್ತಕಗಳು ಬದುಕಿನ ಯಶಸ್ಸಿಗೆ ರಹದಾರಿ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಸ್ತಕವನ್ನು ಬೆಳಗುವ ಪುಸ್ತಕಗಳು ಮತ್ತು ದಿನಪತ್ರಿಕೆಗಳ ಅಧ್ಯಯನದಲ್ಲಿ ಯುವ ಸಮೂಹ ಹೆಚ್ಚು ತೊಡಗಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಹೇಳಿದರು.

ನಗರದ ಹೆಚ್‌.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ಸಾಂಸ್ಕೃತಿಕ ಸಂಘ, ಕ್ರೀಡಾ ವೇದಿಕೆ, ಭಾರತ ಸೇವಾದಳ, ಎನ್.ಎಸ್.ಎಸ್ ಘಟಕ, ರೋವ಼ರ್ ರೇಂಜರ್ಸ್, ರೆಡ್ ಕ್ರಾಸ್ ಕ್ಲಬ್‌ಗಳ ಉದ್ಘಾಟನಾ ಸಮಾರಂಭದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಜ್ಞಾನದ ನಿರಂತರ ಜ್ಯೋತಿ ಮನಗಳಲ್ಲಿ ಬೆಳಗಲಿ. ತಾನು ಕಲಿಯದ ಶಿಕ್ಷಕ, ಇನ್ನೊಬ್ಬರನ್ನು ಎಂದಿಗೂ ಕಲಿಸಲಾರ. ನಿರಂತರ ಅಧ್ಯಯನ ಎಲ್ಲಾ ಕ್ಷೇತ್ರಗಳಲ್ಲಿ ಅವಶ್ಯಕ. ಪುಸ್ತಕಗಳು ನಮ್ಮ ಮಸ್ತಕವನ್ನು ಬೆಳಗುತ್ತದೆ‌. ದಿನಪತ್ರಿಕೆಗಳು ಹಾಗೂ ಪುಸ್ತಕಗಳು ಬದುಕಿನ ಯಶಸ್ಸಿಗೆ ರಹದಾರಿ. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ, ವಿವಿಧ ವಿದ್ಯಾರ್ಥಿ ವೇದಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಕೌಶಲ್ಯತೆಯುಳ್ಳ ವ್ಯಕ್ತಿತ್ವ ವಿಕಸನ ಸಾಧ್ಯ.

ಅರ್ಹತೆಯಿಂದ ಒಳ್ಳೆಯ ಅವಕಾಶ, ಯೋಗ್ಯತೆಯಿಂದ ಮರ್ಯಾದೆ ಸಿಗುತ್ತದೆ‌. ಅಂತಹ ಅರ್ಹತೆ ಮತ್ತು ಯೋಗ್ಯತೆ ನಿಮ್ಮದಾಗಲಿ. ಜಗತ್ತಿನಲ್ಲಿ ಅತ್ಯಂತ ಬೆಲೆ ಬಾಳುವ ವಸ್ತು ಅಮ್ಮನ ಮಡಿಲು ಮತ್ತು ಅಪ್ಪನ ಹೆಗಲು‌. ತಂದೆ ತಾಯಿ ಹಿರಿಯರ ಆಶಯಗಳನ್ನು ಗೌರವಿಸಿ. ಅಪ್ಪ ಅಮ್ಮ ಇಲ್ಲದವರು ಅನಾಥರಲ್ಲ, ಅವರ ನಿಜವಾದ ಬೆಲೆ ಗೊತ್ತಿಲ್ಲದವರು ಅನಾಥರು‌.
ಆಧುನಿಕತೆಯ ಭರದಲ್ಲಿ ಜೀವನ ಮೌಲ್ಯ ಕಳೆದುಕೊಂಡಿದ್ದೇವೆ. ಅಜ್ಜಿಯ ಮನೆಯ ಸಂಭ್ರಮವನ್ನು ಪಡೆಯದೆ, ಕೇವಲ ಬೇಸಿಗೆ ಶಿಬಿರಕ್ಕೆ ಸೀಮಿತವಾಗಿದ್ದೇವೆ. ಬಾಹ್ಯ ಸೌಂದರ್ಯಕ್ಕಿಂತ ನಾವು ಮಾಡುವ ಕೆಲಸ ಮತ್ತು ವ್ಯಕ್ತಿತ್ವದ ಮೂಲಕ ಆಂತರ್ಯ ಸೌಂದರ್ಯವಂತರಾಗಿ‌.

ಅದೃಷ್ಟದಿಂದ ಬಂದಿದ್ದು ಅಹಂಕಾರ ನೀಡಿದರೆ, ಕಷ್ಟಪಟ್ಟು ಸಂಪಾದಿಸಿದ್ದು ಆತ್ಮ ತೃಪ್ತಿ ನೀಡುತ್ತದೆ. ಪ್ರತಿಭೆ ಮತ್ತು ರೂಪ ದೇವರ ಕೊಡುಗೆ, ಕೀರ್ತಿ ಮನುಷ್ಯನ ಸೃಷ್ಟಿ, ಅದರೆ ವ್ಯಕ್ತಿತ್ವ ಮತ್ತು ಅಹಂಕಾರ ನಮ್ಮ ಸೃಷ್ಟಿ‌. ಏನು ಹೇಳುತ್ತೇವೆ ಎನ್ನುವುದು ಮುಖ್ಯವಲ್ಲ, ಹೇಗೆ ಹೇಳುತ್ತೇವೆ ಎಂಬುದು ಮುಖ್ಯ. ದೃಷ್ಟಿ ಚೆನ್ನಾಗಿದ್ದರೆ ಸೃಷ್ಟಿ ಚೆನ್ನಾಗಿರುತ್ತದೆ. ಈ ಹಿನ್ನಲೆಯಲ್ಲಿ ಸಮಾಜಮುಖಿ ದೃಷ್ಟಿಕೋನ ನಿಮ್ಮದಾಗಲಿ ಎಂದು ಆಶಿಸಿದರು.
ಮುಖ್ಯ ಅತಿಥಿಗಳಾದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪ್ಪ.ಎಸ್.ಗುಂಡಪಲ್ಲಿ ಮಾತನಾಡಿ, ಒಳ್ಳೆಯ ಕೇಳುಗರು ಉತ್ತಮ ವ್ಯಕ್ತಿತ್ವಗಳಾಗಿ ಬದಲಾಗುತ್ತಾರೆ. ಇಂದಿನ ಯುವ ಸಮೂಹ ಕೇಳುವ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಹಣದ ಅಪವ್ಯಯಕ್ಕಿಂತ ಸಮಯದ ಅಪವ್ಯಯ ತುಂಬಾ ಕೆಟ್ಟದ್ದು. ವಿದ್ಯಾರ್ಥಿ ಜೀವನದ ಅಮೂಲ್ಯ ಸಮಯವನ್ನು ಕೌಶಲ್ಯ ಪೂರ್ಣವಾಗಿ ಬಳಸಿಕೊಳ್ಳಿ. ಗುರಿಯನ್ನು ತಲುಪುವತ್ತ ಪ್ರಾಮಾಣಿಕ ಪ್ರಯತ್ನ ನಡೆಯಲಿ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕೆ.ಅಂಜನಾಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ.ಬಿ.ಪಿ, ಎನ್ಇಎಸ್ ನಿರ್ದೇಶಕ ಹೆಚ್.ಸಿ.ಶಿವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 572 ಅಂಕ ಪಡೆದ ವಿದ್ಯಾರ್ಥಿ ಸಮರ್ಥ.ಈ.ಜಿ ಅವರನ್ನು ಸನ್ಮಾನಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ | ಜು.18ರಂದು ಹಾಸನ ಜಿಲ್ಲೆಯ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಸಣ್ಣ ಉದ್ಯೋಗದಾರರಿಗೆ ಬ್ಯಾಂಕ್ ವ್ಯವಹಾರ ಆಧರಿಸಿ ನೋಟೀಸ್: ದತ್ತಾತ್ರಿ ಖಂಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿಇಟಿ ವಂಚಿತ ಬ್ರಾಹ್ಮಣ ವಿದ್ಯಾರ್ಥಿಗೆ ಮರು ಪರೀಕ್ಷೆಗೆ ಅವಕಾಶ ಕಲ್ಪಿಸಿ | ದತ್ತಾತ್ರಿ ಆಗ್ರಹ

ಸಣ್ಣ ಉದ್ಯೋಗದಾರರಿಗೆ ಬ್ಯಾಂಕ್ ವ್ಯವಹಾರ ಆಧರಿಸಿ ನೋಟೀಸ್: ದತ್ತಾತ್ರಿ ಖಂಡನೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL