ಶಿವಮೊಗ್ಗ: ಬ್ರೇಕ್ ವಿಫಲವಾದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಆಲ್ಕೊಳ ಸಮೀಪದ ಇಳಿಜಾರಿನಲ್ಲಿ ಲಾರಿ ಸಂಚರಿಸುತ್ತಿದ್ದ ವೇಳೆ ಬ್ರೇಕ್ ವಿಫಲವಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್’ಗೆ ಡಿಕ್ಕಿ ಹೊಡೆದು ಅದರ ಮೇಲೆಯೇ ನಿಂತಿದೆ. ಹೆಚ್ಚು ಜನನಿಬಿಡ ಹಾಗೂ ವಾಹನ ಸಂಚಾರ ಹೆಚ್ಚಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ಈ ಕುರಿತಂತೆ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದು, ಚಾಲಕನ ಜಾಣ್ಮೆ ಹಾಗೂ ಸಮಯಪ್ರಜ್ಞೆಯಿಂದ ಸಂಭವನೀಯ ಅವಘಡ ತಪ್ಪಿದೆ. ಯಾರಿಗೂ, ಯಾವುದೇ ರೀತಿಯಲ್ಲಿ ತೊಂದರೆಯಾಗಿಲ್ಲ ಎಂದಿದ್ದಾರೆ.
(ವರದಿ: ಡಾ.ಸುಧೀಂದ್ರ)
Discussion about this post