ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಬಾರಿಯ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ಇನ್ನೊಂದು ದಿನ ಬಾಕಿ ಇರುವಂತೆಯೇ ಬಿಜೆಪಿಯ #BJP ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ಶಿವಮೊಗ್ಗ #Shivamogga ನಗರ ಕ್ಷೇತ್ರದಿಂದ ಸಂಘ ಪರಿವಾರದ ಹಿನ್ನೆಲೆಯುಳ್ಳ, ಮಹಾನಗರ ಪಾಲಿಕೆ ಸದಸ್ಯ ಎಸ್.ಎನ್. ಚನ್ನಬಸಪ್ಪ(ಚೆನ್ನಿ) ಅವರಿಗೆ ಟಿಕೇಟ್ ಘೋಷಣೆ ಮಾಡಲಾಗಿದೆ.

ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ 1 ದಿನ ಉಳಿದಿರುವ ವೇಳೆಯಲ್ಲಿ ಅಳೆದು ತೂಗಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
ಈ ಮುಂಚೆ ಮೂರು ಹಂತಗಳಲ್ಲಿ 222 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದ ಬಿಜೆಪಿ ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಗಳ ಅಭ್ಯರ್ಥಿಗಳನ್ನು ಮಾತ್ರ ಬಾಕಿ ಉಳಿಸಿಕೊಂಡಿತ್ತು. ಇಂದು ರಾತ್ರಿ ಆ ಎರಡು ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಶಿವಮೊಗ್ಗದಿಂದ ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಿದೆ.
ಇನ್ನು ನಿನ್ನೆಯಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಂಸದ ಬಿವಿ ನಾಯಕ್ ಅವರಿಗೆ ಮಾನ್ವಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post