ತಾಯಿಯ ಎದೆಹಾಲನ್ನು ಅಮೃತಕ್ಕೆ ಹೋಲಿಸುತ್ತೇವೆ. ಎದೆಹಾಲು Breast Milk ಕೊಡುವುದರಿಂದ 8 ಲಕ್ಷಕ್ಕೂ ಹೆಚ್ಚು ಮಕ್ಕಳ ಪ್ರಾಣವನ್ನು ಒಂದು ವರ್ಷದಲ್ಲಿ ಉಳಿಸಬಹುದು ಎಂದು ಮಕ್ಕಳ ತಜ್ಞ ಡಾ. ಸರ್ಜಿ ಪೌಂಡೇಶನ್ ಅಧ್ಯಕ್ಷರಾದ ಡಾ. ಧನಂಜಯ್ ಸರ್ಜಿ Dr. Dhananjaya Sarji ಹೇಳಿದ್ದಾರೆ.
Also read: ಗೀತಾ ಜಯಂತಿ ಪ್ರಯುಕ್ತ ಡಿ.21-23ರವರೆಗೆ ಭಗವದ್ಗೀತೆ ಆಧರಿತ ವಿಶೇಷ ಉಪನ್ಯಾಸ
ಒಂದು ಅಂಕಿ ಅಂಶದ ಪ್ರಕಾರ ಶೇ.46 ರಷ್ಟು ನವಜಾತ ಶಿಶುಗಳಿಗೆ ಸಮರ್ಪಕವಾಗಿ ಸ್ತನ್ಯ ಪಾನವಾಗುತ್ತಿಲ್ಲ ಎಂದು ತಿಳಿದು ಬರುತ್ತಿದೆ. ಇದರ ಪರಿಣಾಮ ಮಕ್ಕಳಲ್ಲಿ ನಾನಾ ರೀತಿಯ ಸಮಸ್ಯೆಗಳು ಉಂಟಾಗುತ್ತಿವೆ. ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಅಥವಾ ಮೆದುಳಿನ ಬೆಳವಣಿಗೆ ಆಗಿರಬಹುದು, ಇವೆಲ್ಲದರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರ ಪ್ರಾಮುಖ್ಯತೆ ಅರಿತೇ ಎಲ್ಲ ನವ ಜಾತ ಶಿಶುಗಳಿಗೂ ತಾಯಂದಿರ ಎದೆಹಾಲು ದೊರೆಯಬೇಕೆಂಬ ಸದುದ್ದೇಶದೊಂದಿಗೆ ಎದೆ ಹಾಲಿನ ಬ್ಯಾಂಕ್‍ನ್ನು ಪ್ರಪಂಚಾದ್ಯಂತ ಸ್ಥಾಪನೆ ಮಾಡಲಾಗಿದೆ ಇದೇ ಮೊದಲ ಬಾರಿಗೆ ಮಧ್ಯ ಕರ್ನಾಟಕದಲ್ಲಿ ಅಮೃತ ಬಿಂದು ಶಿವಮೊಗ್ಗ ಸರ್ಜಿ ಆಸ್ಪತ್ರೆಯಲ್ಲಿ ಸ್ಥಾಪನೆಯಾಗಿದೆ . ಎದೆಹಾಲಿನಲ್ಲಿ ಅನೇಕ ಉತ್ತಮ ಅಂಶಗಳಿವೆ. ಇನ್ನು ಇದರ ಬಗ್ಗೆ ಸಂಶೋಧನೆ ನಡೆಯುತ್ತ ಇದೆ. ಎಲ್ಲವನ್ನು ನೀಗಿಸುವ ಶಕ್ತಿ ಎದೆಹಾಲಿನಲ್ಲಿ ಇದೆ ಎಂದರು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಕೋಡಿಮಠದ ಶ್ರೀ ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿಗಳು ಮಾತನಾಡಿ, ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ ಎಂಬ ಪರಂಪರೆಯನ್ನು ಇಡೀ ಜಗತ್ತೆ ಹೊಂದಿದೆ. ಎದೆಹಾಲಿನಿಂದ ಬರುವ ಶಕ್ತಿ ಅಪಾರವಾದದ್ದು ಮತ್ತು ಅದು ಎಲ್ಲಿಯೂ ಸಿಗುವುದಿಲ್ಲ ಎಂದರು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ, ಬೆಂಗಳೂರು ದಯಾನಂದ ಸಾಗರ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಆಶಾ ಬೆನಕಪ್ಪ, ಶಿವಮೊಗ್ಗದ ಖ್ಯಾತ ವೈದ್ಯ ಡಾ.ಪಿ.ನಾರಾಯಣ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ್ ಜೀ, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ, ರೋಟರಿ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ರೊ.ಎಚ್.ಪಿ. ಶಿವರಾಜ್, ರೊ.ಜೆ.ಪಿ.ಚಂದ್ರು, ಸರ್ಜಿ ಆಸ್ಪತ್ರೆ ಮೆಡಿಕಲ್ ಸೂಪರಿಂಟ್‍ಂಡೆಂಟ್ ಡಾ. ಪ್ರಶಾಂತ್ ಎಸ್.ವಿ., ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post