ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ತಿರುವಿನವರೆಗೆ ರಸ್ತೆ ಕುಸಿದಿರುವುದರಿಂದ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ತಾತ್ಕಾಲಿಕ ಆದೇಶ ಹೊರಡಿಸಿದ್ದಾರೆ.

ಸಂಚಾರಕ್ಕಾಗಿ ಹಾಲಿ ಬಳಕೆ ಮಾಡುತ್ತಿರುವ ರಸ್ತೆ ಹಾಗೂ ವಾಹನಗಳು ಸಂಚರಿಸುವ ಪರ್ಯಾಯ ಮಾರ್ಗಗಳ ವಿವರ:
- ಶಿವಮೊಗ್ಗ ಮಾರ್ಗದಿಂದ ಕುಂದಾಪುರ ಮತ್ತು ಕುಂದಾಪುರದಿಂದ-ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಸಾಗರ-ಹೊನ್ನಾವರ(ಎನ್ಹೆ
ಚ್69) ಮಾರ್ಗದಲ್ಲಿ ಸಂಚರಿಸುವುದು. - ಶಿವಮೊಗ್ಗದಿಂದ ಉಡುಪಿ-ಮಂಗಳೂರು ಮತ್ತು ಮಂಗಳೂರಿನಿಂದ ಉಡುಪಿ ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಕೊಪ್ಪ-ಕಾರ್ಕಳ-ಮಂಗಳೂರು(
ಎಸ್‍ಹೆಚ್ 57, 65 ಮತ್ತು ಎನ್‍ಹೆಚ್ 169ರಲ್ಲಿ) ಮಾರ್ಗದಲ್ಲಿ ಸಂಚರಿಸುವುದು. - ಶಿವಮೊಗ್ಗದಿಂದ ಕುಂದಾಪುರಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಹೊಸನಗರ-ಹುಲಿಕಲ್ ಘಾಟ್-ಸಿದ್ದಾಪುರ-ಕುಂದಾಪುರ ಮಾರ್ಗದಲ್ಲಿ ಸಂಚರಿಸುವುದು
- ಶಿವಮೊಗ್ಗದಿಂದ ಮಂಗಳೂರಿಗೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ನರಸಿಂಹರಾಜಪುರ-ಕೊಪ್ಪ-ಶೃಂ
ಗೇರಿ-ಕಾರ್ಕಳ-ಮಂಗಳೂರು.
ಕುಸಿದಿರುವ ಸೇತುವೆ ಮತ್ತು ರಸ್ತೆ ದುರಸ್ತಿ ಆಗುವವರೆಗೆ ಅಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಮೇಲ್ಕಂಡ ಪರ್ಯಾಯ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ವ್ಯವಸ್ಥೆಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















