No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ: ನ್ಯಾ. ಮಂಜುನಾಥ ನಾಯಕ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 12, 2023
in ಶಿವಮೊಗ್ಗ
0
ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ: ನ್ಯಾ. ಮಂಜುನಾಥ ನಾಯಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮಕ್ಕಳ ವಿಚಾರದಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳ ಕಡೆ ಗಮನ ಹರಿಸಿ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ದತಿ ಒಂದು ಅಂತರಾಷ್ಟ್ರೀಯ ಪಿಡುಗು. ಬಡತನ, ಶಿಕ್ಷಣ ಸೌಲಭ್ಯದ ಕೊರತೆ, ಪೋಷಕರ ಅನಾರೋಗ್ಯ ಇನ್ನೂ ಹಲವಾರು ಕಾರಣಗಳಿಂದ ಬಾಲ ಕಾರ್ಮಿಕತೆ ಹೆಚ್ಚುತ್ತಿದೆ. ಕೆಲವೆಡೆ ಪ್ರೌಢಶಾಲೆಗಳು ಇಲ್ಲ, ಇನ್ನು ಕೆಲವೆಡೆ ಪೋಷಕರು ತಮ್ಮ ಅನಾರೋಗ್ಯ, ಬಡತನದಿಂದ ಮಕ್ಕಳನ್ನು ಕೆಲಸಕ್ಕೆ ಸೇರಿಸುವುದು, ಕೆಲ ಕೈಗಾರಿಕೆಗಳು ಆಮಿಷ ತೋರಿ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುತ್ತಿರುವುದನ್ನು ಕಾಣುತ್ತಿದ್ದೇವೆ.

ದೇಶ ಸೇವೆ, ತಂತ್ರಜ್ಞಾನ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಅಭಿವೃದ್ದಿಯನ್ನು ಕಾಣುತ್ತಿದೆ ಎನ್ನಲಾಗುತ್ತಿದೆ. ಆದರೆ ಬಾಲ ಕಾರ್ಮಿಕತೆ ಜಾರಿ ಇರುವೆಡೆ ಅಭಿವೃದ್ದಿ ಎನ್ನಲು ಸಾಧ್ಯವಿಲ್ಲ. ಇದನ್ನು ತೊಡೆದುಹಾಕಲು ಅನೇಕ ಕಾರ್ಯಕ್ರಮಗಳು, ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕೇವಲ ಕಾಯ್ದೆಯಿಂದ ಮಾತ್ರ ಈ ಪಿಡುಗಿನ ನಿವಾರಣೆ ಸಾಧ್ಯವಿಲ್ಲ. ನಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು ಎಂದರು.
ಶಾಲೆಯನ್ನು ಅರ್ಧಕ್ಕೆ ಬಿಟ್ಟವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಿದೆ. ಕೇವಲ ನಗರದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಗಮನಿಸಿದರೆ ಸಾಲದು, ಹಳ್ಳಿಗಳಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಕೃಷಿ ಕ್ಷೇತ್ರದಲ್ಲಿ ತೊಡಗಿಸಿರುವುದು ಆತಂಕಕಾರಿಯಾಗಿದ್ದು, ಇಂತಹ ಮಕ್ಕಳ ಕಡೆ ಗಮನ ಹರಿಸಿ ಅವರನ್ನು ಶಿಕ್ಷಣದಲ್ಲಿ ಮುಂದುವರೆಸಬೇಕು. ಉದ್ಯಮಿಗಳು, ಹೋಟೆಲ್ ಮಾಲೀಕರು, ಇತರೆ ಉದ್ದೆಮೆ ಮತ್ತು ಕೃಷಿ ಮಾಲೀಕರು ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಬಾರದು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎನ್.ಚಂದನ್ ಮಾತನಾಡಿ, ಮಕ್ಕಳು ದೇವರು ನೀಡಿದ ಒಂದು ವರ ಮತ್ತು ಮಕ್ಕಳೇ ದೇಶದ ಆಧಾರಸ್ತಂಭ. ಇಂತಹ ಮಕ್ಕಳೆಡೆ ನಮ್ಮೆಲ್ಲರಿಗೆ ಸಾಮಾಜಿಕ ಹೊಣೆಗಾರಿಕೆ ಇದೆ. ಕೇವಲ ನಮ್ಮ ಮಕ್ಕಳನ್ನು ನಾವು ಶಿಕ್ಷಿತರನ್ನಾಗಿ ಉತ್ತಮ ಸೌಲಭ್ಯ ನೀಡಿದರೆ ಸಾಲದು, ಸೌಲಭ್ಯ ವಂಚಿತ ಮಕ್ಕಳು ಕಂಡುಬಂದಲ್ಲಿ ಅವರನ್ನು ಮುಖ್ಯವಾಹಿನಿಗೆ ತರಬೇಕು. ಸರ್ಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಜಾರಿಗೆ ತಂದಿದ್ದು ಅದರ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಸರ್ಕಾರದ ವಿವಿಧ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳಬೇಕು. ಕಾಯ್ದೆ ಪಾಲನೆ ಮನಸ್ಥಿತಿ ಎಲ್ಲರಲ್ಲಿ ಬರಬೇಕು ಎಂದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಜಿ.ಎಂ ಮಾತನಾಡಿ, ಯಾವುದೇ ಶಾಲೆ ಬಿಟ್ಟ ಮಕ್ಕಳು ಕಂಡುಬಂದಲ್ಲಿ ಮಕ್ಕಳು ಸೇರಿದಂತೆ ಯಾರೇ ಆಗಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ತಿಳಿಸಬೇಕು. ಆಗ ಮಕ್ಕಳನ್ನು ರಕ್ಷಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗುತ್ತದೆ. ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಹಾಗೂ ಎಚ್ಚರಿಕೆಯಿಂದ ಮೊಬೈಲ್ ಬಳಸಬೇಕು. ಹೆಣ್ಣುಮಕ್ಕಳು ಗುಡ್ ಮತ್ತು ಬ್ಯಾಡ್ ಟಚ್ ಬಗ್ಗೆ ತಿಳಿದಿರಬೇಕು. ಯಾವುದೇ ಆಮಿಷಗಳಿಗೆ ಬಲಿಯಾಗದೇ ಶಿಕ್ಷಣಕ್ಕೆ ಹೆಚಿನ್ಚ ಮಹತ್ವ ನೀಡಬೇಕೆಂದರು.

Also read: ಕಲುಷಿತ ನೀರು ದುರಂತ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಅಧ್ಯಯನ ನಡೆಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಿ.ಜಿ.ಶಿವಮೂರ್ತಿ ಮಾತನಾಡಿ, ಪೋಷಕರು ಮಕ್ಕಳ ಶಿಕ್ಷಣದ ಕಡೆ ಹೆಚ್ಚಿನ ಒತ್ತು ನೀಡಬೇಕು. ಹಾಗೂ ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ನಡೆದುಕೊಂಡು ಅವರಿಗೆ ಉತ್ತಮ ವಾತಾವರಣ ನೀಡಬೇಕೆಂದರು.
ಕಾರ್ಯಕ್ರಮದಲ್ಲಿ ಸ್ತಬ್ದಚಿತ್ರ ವಾಹನ ಮತ್ತು ಕರಪತ್ರದ ಮೂಲಕ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಬಾಲಕಾರ್ಮಿಕನಾಗಿ ದುಡಿಯುತ್ತಿದ್ದ ಬಾಲಕಕನ್ನು ರಕ್ಷಿಸಿ ಮುಖ್ಯ ವಾಹಿನಿಗೆ ತಂದು ಪ್ರಸ್ತುತ 9 ನೇ ತರಗತಿಯಲ್ಲಿ ಓದುತ್ತಿರುವ ಹೊಸಳ್ಳಿಯ ವಿನಯ್ ನನ್ನು ಅಭಿನಂದಿಸಲಾಯಿತು. ಎಲ್ಲರಿಗೂ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸುಮಾ ಹೆಚ್ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಮಿಕ ನಿರೀಕ್ಷಕ ಭೀಮೇಶ್ ಪಿ, ಬಿಇಓ ನಾಗರಾಜ್, ಇತರೆ ಇಲಾಖೆ ಅಧಿಕಾರಿಗಳು, ಬಾಲ ಕಾರ್ಮಿಕ ಯೋಜನಾ ಸೊಸೈಟಿ ಪಿಡಿ ರಘುರಾಂ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕಲುಷಿತ ನೀರು ದುರಂತ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಅಧ್ಯಯನ ನಡೆಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

Next Post

ಉನ್ನತ ಶಿಕ್ಷಣದಲ್ಲಿ ಉದ್ಯೋಗಾಧಾರಿತ ಪಠ್ಯಕ್ರಮಗಳ ಅಳವಡಿಕೆಗೆ ಹೆಚ್ಚಿನ ಆದ್ಯತೆ: ಸಚಿವ ಸುಧಾಕರ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉನ್ನತ ಶಿಕ್ಷಣದಲ್ಲಿ ಉದ್ಯೋಗಾಧಾರಿತ ಪಠ್ಯಕ್ರಮಗಳ ಅಳವಡಿಕೆಗೆ ಹೆಚ್ಚಿನ ಆದ್ಯತೆ: ಸಚಿವ ಸುಧಾಕರ್‌

ಉನ್ನತ ಶಿಕ್ಷಣದಲ್ಲಿ ಉದ್ಯೋಗಾಧಾರಿತ ಪಠ್ಯಕ್ರಮಗಳ ಅಳವಡಿಕೆಗೆ ಹೆಚ್ಚಿನ ಆದ್ಯತೆ: ಸಚಿವ ಸುಧಾಕರ್‌

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾ.13ರಿಂದ ಎರಡು ದಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಮಾ.13ರಿಂದ ಎರಡು ದಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

March 11, 2026
ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

March 11, 2026
ಗಮನಿಸಿ! ನ.14-ಡಿ.2ರವರೆಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೂ ತಟ್ಟಿತು ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ | ಏನಾಯ್ತು?

March 11, 2026
ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

March 11, 2026
ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL