ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಲ್ಲ ಚಿಕ್ಕ ಮಕ್ಕಳು ಸಿಹಿ ತಿನಿಸು ತಂದ ನಂತರ ತಪ್ಪದೇ ಬ್ರಷ್ ಮಾಡಿಸಬೇಕು ಎಂದು ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ವಿನಯ ಶ್ರೀನಿವಾಸ್ ಸಲಹೆ ನೀಡಿದ್ದಾರೆ.
ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯವು ಮಕ್ಕಳ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಮಕ್ಕಳ ದಂತ ಆರೋಗ್ಯದ ಕುರಿತು ಜಾಗೃತಿ, ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಸಪ್ತಾಹ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯವು ಒಂದು ವಾರಗಳ ಕಾಲ ಮಕ್ಕಳಿಗೆ ಉಚಿತ ತಪಾಸಣೆ ಹಾಗೂ ಶಿಬಿರವನ್ನು ಆಯೋಜಿಸಿದ್ದು, ಪೋಷಕರು ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post