ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಗುರುಟೆ ಬಳಿ ನಡೆದಿದೆ.
ಸಾಗರದಿಂದ ಹೊರಟು ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್, ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ತೀವ್ರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post