ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ-ಭದ್ರಾವತಿ ನಡುವಿನ 206 ಹೆದ್ದಾರಿಯಲ್ಲಿ Shivamogga-Bhadravathi National Highway ನಿನ್ನೆ ರಾತ್ರಿ ಕೆಎಸ್’ಆರ್’ಟಿಸಿ ಬಸ್ ಹಾಗೂ ಟ್ಯಾಕ್ಸಿ ನಡುವೆ ಅಪಘಾತ ಸಂಭವಿಸಿದ್ದು, ಅದೃಷ್ಠವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಹೆದ್ದಾರಿಯ ಜೈನ್ ಪಬ್ಲಿಕ್ ಶಾಲೆಯ ಬಳಿಯಲ್ಲಿ ಘಟನೆ ಸಂಭವಿಸಿದೆ. ಮೈಸೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಕೆಎಸ್’ಆರ್’ಟಿಸಿ ಬಸ್ ಹಾಗೂ ಶಿವಮೊಗ್ಗದಿಂದ ಭದ್ರಾವತಿಗೆ ತೆರಳುತ್ತಿದ್ದ ಟ್ಯಾಕ್ಸಿ ನಡುವೆ ಡಿಕ್ಕಿ ಸಂಭವಿಸಿದೆ.
ಟ್ಯಾಕ್ಸಿಯಲ್ಲಿದ್ದ ಪ್ರಯಾಣಿಕರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ಹಾಗೂ ಟ್ಯಾಕ್ಸಿ ಮುಂಭಾಗ ಜಖಂಗೊಂಡಿದೆ.
Also read: ಶರಾವತಿ ಹಿನ್ನೀರಿಯಲ್ಲಿ ಮುಳಗಿದ ಬೃಹತ್ ಲಾರಿ: ಕಾರಣವೇನು?
ಶಿವಮೊಗ್ಗ-ಭದ್ರಾವತಿ ನಡುವೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆಗಳಲ್ಲಿ ಏಕ ಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ, ಹಲವು ಕಡೆಗಳಲ್ಲಿ ರಸ್ತೆ ಉತ್ತಮವಾಗಿರುವ ಹಿನ್ನೆಲೆಯಲ್ಲಿ ವಾಹನಗಳ ವೇಗವೂ ಸಹ ಹೆಚ್ಚಾಗಿರುವುದು ಇಂತಹ ಅಪಘಾತಗಳಿಗೆ ಕಾರಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post