ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಾಲೆಯ ನೀರು ಎಥೇಚ್ಛವಾಗಿ ಪೋಲಾಗಿ ರಸ್ತೆಯ ಮೇಲೆ ಹರಿದು ಹೋಗುತ್ತಿರುವುದನ್ನು ಕಂಡ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ತತಕ್ಷಣವೇ ಅದನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಡಾ ವ್ಯಾಪ್ತಿಯ ಶಿವಮೊಗ್ಗ ತಾಲೂಕು ವೆಂಕಟೇಶ್ವರ ನಗರ, ಯಲವಟ್ಟಿ ಭಾಗಕ್ಕೆ ಭೇಟಿ ನೀಡಿದರು. ಕಳೆದ 20 ದಿನಗಳ ಹಿಂದೆ ಪಕ್ಷದ ಕೆಲಸದ ನಿಮಿತ್ತ ಹಸೂಡಿ ಮಹಾ ಶಕ್ತಿ ಕೇಂದ್ರಕ್ಕೆ ಪ್ರವಾಸ ಹೋಗುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ನಾಲೆಯ ನೀರು ಪೋಲಾಗಿ ರಸ್ತೆಯ ಮೇಲೆ ಹರಿದು ಹೋಗುತ್ತಿರುವುದು ಗಮನಿಸಿ ತಕ್ಷಣವೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಹಾಗೂ ನೀರು ಗಂಟಿ ಗಳನ್ನು ಸ್ಥಳಕ್ಕೆ ಕರೆಸಿಕೊಂಡು ನಾಲೆಯಲ್ಲಿ ಹೂಳು ಇರುವ ಪರಿಣಾಮ ನೀರು ಸರಾಗವಾಗಿ ಹರಿಯದೆ ತೊಂದರೆಯಾಗುತ್ತಿದೆ ಈ ಸಮಸ್ಯೆಯನ್ನು ಶೀಘ್ರವೇ ಬಗೆ ಹರಿಸುವಂತೆ ಸೂಚನೆ ನೀಡಿದರು.
ಈ ಸಮಯದಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳು ಕಾಲುವೆ ನಿರ್ವಹಣೆ ಮಾಡಲು ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ ಎಂದರು.
ತಕ್ಷಣವೇ ಇದಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊತೆ ಮಾತನಾಡಿ ಜಿಲ್ಲೆಯ ಹಲವೆಡೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ನಾಲೆಯಲ್ಲಿ ತುಂಬಿರುವ ಹೂಳು ಎತ್ತಿಸಿದ್ದು, ಈ ಭಾಗದಲ್ಲಿ ಕೂಡ ನರೇಗಾ ಉಪಯೋಗಿಸಿಕೊಳ್ಳುವಂತೆ ಸೂಚಿಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ತಕ್ಷಣವೇ ಮಾತನಾಡಿ ಕ್ರಿಯಾ ಯೋಜನೆ ರೂಪಿಸುವಂತೆ ಹೇಳಿದರು.
ಇಂದು ನರೇಗಾ ಅಡಿಯಲ್ಲಿ ಕಾಲುವೆಯಲ್ಲಿ ತುಂಬಿದ್ದ ಹೂಳು ಎತ್ತುವ ಕಾಮಗಾರಿಗೆ ಚಾಲನೆ ದೊರಕಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಹೊಳೆಬೆನವಳ್ಳಿ ಪಿಡಿಓ ಹಾಗೂ ಗ್ರಾಮದ ಪ್ರಮುಖರಾದ ಮಲ್ಲಿಕಾರ್ಜುನ, ಶ್ರೀಧರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post