ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಕಾಂಗ್ರೆಸ್- ಬಿಜೆಪಿಗೂ ಗ್ರಾಮಾಂತರದಲ್ಲಿ ಕಾಂಗ್ರೆಸ್- ಜೆಡಿಎಸ್‌ಗೂ ನೇರ ಸ್ಪರ್ಧೆ ಇರುತ್ತದೆ. ಜಿಲ್ಲೆಯ ಎಲ್ಲಾ ಏಳು ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಲಿದೆ ಎಂದು ಹೆಚ್.ಎಸ್. ಸುಂದರೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳು ಈಗಾಲೇ ಪ್ರಚಾರ ಮುಂದುವರಿಸಿದ್ದು, ಕಾಂಗ್ರೆಸ್ ಪರ ಅಲೆ ಕಾಣುತ್ತಿದೆ. ಪಕ್ಷ ಬಿಟ್ಟು ಹೋದವರಿದಂದ ಯಾವ ಪರಿಣಾಮವೂ ಆಗುವುದಿಲ್ಲ. ರಾಜ್ಯ ಮತ್ತು ಕೇಂದ್ರ ನಾಯಕರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಮೇ 2ಕ್ಕೆ ರಾಹುಲ್ ಗಾಂಧಿ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದರು
ಜಿಲ್ಲೆಯ ಸಾಗರ ಮತ್ತು ಶಿಕಾರಿಪುರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡುತ್ತಿದ್ದ ಪಕ್ಷದ 21ಕಾರ್ಯಕರ್ತರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪ್ರಮುಖವಾಗಿ ಶಿಕಾರಿಪುರದ ಎಸ್.ಸಿ. ವೀರೇಶ್, ಉಮೇಶ್, ರಾಘವೇಂದ್ರ ನಾಯ್ಕ್ ಹಾಗೂ ಸಾಗರದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ. ರಾಜನಂದಿನಿ, ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಹುನಗೋಡು ರತ್ನಾಕರ್ ಮುಂತಾದವರಿದ್ದಾರೆ. ಆದರೆ ಶಿಕಾರಿಪುರದಲ್ಲಿ ಸ್ವತಂತ್ರ ಅಭ್ಯರ್ಥಿ ನಾಗರಾಜ ಗೌಡರನ್ನು ಉಚ್ಚಾಟಿಸಲು ಈಗಾಗಲೇ ರಾಜ್ಯ ಸಮಿತಿಗೆ ಶಿಫಾರಸು ಮಾಡಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post