ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಠಿತ ಪಿಇಎಸ್ ಕಾಲೇಜಿನಲ್ಲಿ, ಎರಡು ದಿನಗಳ ಕಾಲ ನಡೆದ ಟೊಯೋಟಾ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯಲ್ಲಿ, ಪಿಇಎಸ್ ಪಾಲಿಟೆಕ್ನಿಕ್ ಕಾಲೇಜಿನ ವಿವಿಧ ವಿಭಾಗದ 15 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.
ಈ ಕುರಿತಂತೆ ಮಾತನಾಡಿದ ಕೆರಿಯರ್ ಡೆವಲಪ್ಮೆಂಟ್ ಸೆಂಟರ್ ವಿಭಾಗದ ಮುಖ್ಯಸ್ಥ ಡಾ.ಟಿ.ಎಂ. ಪ್ರಸನ್ನ ಕುಮಾರ್, ಟೊಯೋಟಾದ ಆಯ್ಕೆ ಪ್ರಕ್ರಿಯೆಯಲ್ಲಿ ನಮ್ಮ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದು ತುಂಬಾ ಸಂತೋಷದಾಯಕವಾಗಿದೆ ಎಂದರು.
ಈ ಆಯ್ಕೆ ನಮ್ಮಲ್ಲಿನ ಶಿಕ್ಷಣದ ಗುಣಮಟ್ಟಕ್ಕೆ ಸಾಕ್ಷಿಯಾಗಿದ್ದು, ಪಿಇಎಸ್ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತದೆ. ಈ ವಿದ್ಯಾರ್ಥಿಗಳು ಟೊಯೊಟಾದ ಯಶಸ್ಸಿಗೆ ಗಣನೀಯ ಕೊಡುಗೆ ನೀಡುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದಿದ್ದಾರೆ.
Also read: ಪೋಷಕರ ಸಹಭಾಗಿತ್ವದಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯ: ಶಾರದಾ ಪೂರ್ಯನಾಯ್ಕ್
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ನಾಗರಾಜ, ಪಿಇಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಜೆ.ಕೆ. ಗೌತಮ್ ಹಾಗೂ ಪಿಇಎಸ್ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post