No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಕಲಿ ಕಾರ್ಮಿಕ ಕಾರ್ಡ್ ರದ್ದು | ಅಗತ್ಯ ಕ್ರಮಕ್ಕೆ ಸಚಿವ ಸಂತೋಷ್ ಲಾಡ್ ಸೂಚನೆ

kalpa News by kalpa News
January 6, 2025
in ಶಿವಮೊಗ್ಗ
0
ಬಸ್ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ಕಾರಣ | ಸಚಿವ ಸಂತೋಷ್ ಲಾಡ್ ಅಚ್ಚರಿ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಕಲಿ ಕಾರ್ಮಿಕ ಕಾರ್ಡ್ ರದ್ದು ಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ #Minister Santhosh Lad ಹೇಳಿದರು.

ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಕಲಿ ಕಾರ್ಡ್‍ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಾರ್ಡ್‍ಗಳನ್ನು ಕೊಡುವ ಏಜೆನ್ಸಿಗಳೇ ಹುಟ್ಟಿಕೊಂಡಿವೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ನಕಲಿ ಕಾರ್ಡ್‍ಗಳನ್ನು ಗುರುತಿಸಲು ಈಗಾಗಲೇ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಕಾರ್ಮಿಕರ ಕಾರ್ಡ್‍ಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ನಾನು ಗಮನಿಸಿದ್ದೇನೆ. ಈ ಬಗ್ಗೆ ದೂರುಗಳು ಕೂಡ ಬಂದಿವೆ ಎಂದರು.
ಇದಕ್ಕಾಗಿ ಅಂಬೇಡ್ಕರ್ #Ambedkar ಸೇವಾ ಕೇಂದ್ರವನ್ನು ತೆರೆಯಲಾಗುವುದು. ಸುಮಾರು 43 ಕೇಂದ್ರಗಳ ಮೂಲಕ ಸಂಚಾರಿ ವ್ಯಾನ್ ಗಳ ಮೂಲಕವೇ ಕಟ್ಟಡ ನಿರ್ಮಾಣಗಳ ಸ್ಥಳಕ್ಕೇ ಹೋಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಒಂದು ಪಕ್ಷ ಅಲ್ಲಿ ಕೆಲಸ ಮಾಡುವವರಿಗೆ ಕಾರ್ಡ್ ಇಲ್ಲದಿದ್ದರೆ ಕಾರ್ಡ್ ಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ನಕಲಿ ಕಾರ್ಡ್ ಮಾಡಿಕೊಡುವ ಏಜೆನ್ಸಿಗಳ ಮೇಲೆ ಸೂಕ್ತ ಕೈಗೊಳ್ಳಲಾಗುವುದು. ಏನೇ ಆದರೂ ಕಾರ್ಮಿಕರಿಗೆ ನೀಡುವ ಕಾರ್ಡ್‍ಗಳು ಸರ್ಕಾರದಲ್ಲಿ ನೋಂದಣಿಯಾಗಿರಲೇ ಬೇಕಾಗುತ್ತದೆ ಎಂದರು.

Also read: ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿ

ಬಾಲ ಕಾರ್ಮಿಕರನ್ನು ಗುರುತಿಸುವುದಷ್ಟೇ ಅಲ್ಲ, ಅವರ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಬೇರೆ ರಾಜ್ಯಗಳಿಂದ ಬಂದಿರುತ್ತಾರೆ. ಅದನ್ನೂ ನೋಡಬೇಕಾಗುತ್ತದೆ. ಶಾಲೆ, ಬಿಡುವವರ ಸಂಖ್ಯೆ ಹೆಚ್ಚಾಗಲು ಬಾಲ ಕಾರ್ಮಿಕರಾಗುತ್ತಾರೆ ಎಂಬ ಆರೋಪವೂ ಇದೆ. ಆದರೆ ಇದೊಂದೇ ಕಾರಣವಲ್ಲ, ಇದಕ್ಕೆ ಬಡತನವೂ ಕಾರಣವಾಗಿರಬಹುದು. ಮಧ್ಯಾಹ್ನದ ಬಿಸಿಯೂಟದಿಂದ ಶಾಲೆ ಬಿಡುವವರ ಸಂಖ್ಯೆ ಕಡಿಮೆಯಾಗಿದೆ. ಈ ಬಗ್ಗೆ ನಾನು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಕಾರ್ಮಿಕರ ಕಲ್ಯಾಣ ಮಂಡಳಿ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಬಾಲ ಕಾರ್ಮಿಕರು, ಕಟ್ಟಡ ಕಾರ್ಮಿಕರು ಈ ಎಲ್ಲಾ ಕಾರ್ಮಿಕರ ಕಲ್ಯಾಣಕ್ಕಾಗಿ ಬೇರೆ ದೇಶಗಳಿಂದ ಬಂದ ಕಾರ್ಮಿಕರನ್ನು ಗುರುತಿಸಲು ಮತ್ತು ಕೆಲಸ ನೀಡಲು ಹೊಸ ಕಾನೂನಿನ ಅಗತ್ಯವಿದೆ ಎಂದರು.

ಕಾರ್ಮಿಕರಿಗೆ ಕಿಟ್ ನೀಡಲಾಗುತ್ತಿದೆ. ಆದರೆ, ಇದರಲ್ಲಿ ಕಳಪೆ ಎಂದು ಕಂಡು ಬಂದಿದೆ. ಈಗ ನಾವು ಲ್ಯಾಪ್‍ಟಾಪ್ ಕೊಡುತ್ತಿಲ್ಲ. ದೂರುಗಳ ಆಧಾರದಲ್ಲಿ ಅದನ್ನು ಕೂಡ ಗಮನಹರಿಸಲಾಗುವುದು. ಒಟ್ಟಾರೆ, ಕಾರ್ಮಿಕರ ಗ್ರಾಚುಟಿ, ಕನಿಷ್ಠ ವೇತನ, ಉದ್ಯೋಗ ಮೇಳ, ಇಎಸ್‍ಐ, ಕಾರ್ಮಿಕ ಇನ್ಸ್‍ಪೆಕ್ಟರ್ ಗಳ ಕೊರತೆ ಈ ಎಲ್ಲಾ ವಿಚಾರಕ್ಕೆ ಸಂಬಂಧಿಸಿದಂತೆ ಇಲಾಖೆ ವತಿಯಿಂದ ಆಯಾ ಕಾಲಕ್ಕೆ ತಕ್ಕಂತೆ ಕಾನೂನುಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದರು.

ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಆರೋಪದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, 2020ರಲ್ಲಿ ಬಿಜೆಪಿ ಸರ್ಕಾರ ಬಸ್ ಪ್ರಯಾಣ ದರವನ್ನು ಶೇ. 15 ರಷ್ಟು ಹೆಚ್ಚಿಸಿತ್ತು. ಈಗ ನಾವು ಅಷ್ಟೇ ಹೆಚ್ಚಿಸಿದ್ದೇವೆ. ಇದು ಹೇಗೆ ಹೆಚ್ಚಳ ಆಗುತ್ತದೆ. ಅವರೂ ಹೆಚ್ಚಳ ಮಾಡಿದರೆ ನ್ಯಾಯ. ನಾವು ಹೆಚ್ಚಳ ಮಾಡಿದರೆ ಅನ್ಯಾಯವೇ? ಶಕ್ತಿ ಯೋಜನೆಗೂ ಬಸ್ ದರ ಏರಿಕೆಗೂ ಸಂಬಂಧವೇ ಇಲ್ಲ ಎಂದರು.

ಬೇರೆ ಯಾವುದೇ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಹೆಚ್ಚು ಬಸ್‍ಗಳಿವೆ. ಅಲ್ಲದೇ, ಬಸ್ ಪ್ರಯಾಣದರ ಏರಿಕೆಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಯೂ ಕಾರಣವಾಗುತ್ತದೆ. ಕೇಂದ್ರ ಸರ್ಕಾರ ಮನಸು ಮಾಡಿದರೆ ಲೀಟರ್ ಗೆ 40 gರೂ.ಗೆ ನೀಡಬಹುದಲ್ಲವೇ? ಏಕೆ ನೀಡುತ್ತಿಲ್ಲ. ಯಾವುದೇ ದರ ಏರಿಕೆಗೆ ಕೇಂದ್ರವೇ ಕಾರಣ ಎಂದರು.

ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವೇ ಆಗಿದೆ. ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿಯಾಗಿ ಆಳಿದ ಗುಜರಾತ್ ರಾಜ್ಯದ ಕತೆ ಇವತ್ತು ಏನಾಗಿದೆ. ಜಿಡಿಪಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನ ಪಡೆದಿದೆ. ಇಂದು ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಡಾಲರ್ ಬೆಲೆ ಏರಿದೆ. ಭಾರತದ ಸಾಲ ಸ್ವಾತಂತ್ರ್ಯ ಬಂದ ಇತಿಹಾಸದಲ್ಲಿಯೇ ಅತಿ ಹೆಚ್ಚು ಮೋದಿ ಸರ್ಕಾರದಲ್ಲಿ ಆಗಿದೆ. 55 ಲಕ್ಷ ಕೋಟಿ ರೂ. ಇದ್ದ ಸಾಲ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 200 ಲಕ್ಷ ಕೋಟಿ ರೂ. ದಾಟಿದೆ. ಬರೀ ಮಾತನಾಡುವುದಲ್ಲ, ಬಿಜೆಪಿಯವರು ಅಂಕಿ ಅಂಶಗಳ ಜೊತೆ ನನ್ನೊಂದಿಗೆ ಮಾತನಾಡಲಿ ಎಂದು ಸವಾಲು ಹಾಕಿದರು.

ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿಯವರು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಪ್ರಿಯಾಂಕ್ ಖರ್ಗೆಯವರ ಹೆಸರು ಇದೆ ಎಂದು ಹೇಳುತ್ತಾರೆ. ಡೆತ್ ನೋಟ್ ನಲ್ಲಿ ಅವರ ಹೆಸರು ಎಲ್ಲಿದೆ? ಯರಾದರೂ ನೋಡಿದ್ದಾರೆಯೇ? ಈಗಾಗಲೇ ಡೆತ್ ನೋಟ್ ನಲ್ಲಿ ಇರುವವರ ಹೆಸರುಗಳನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮಕರ ಸಂಕ್ರಾಂತಿಗೆ ಮುಖ್ಯಮಂತ್ರಿ ಸಿದ್ಧರಾಮ್ಯ ಬದಲಾವಣೆ ಆಗುತ್ತಾರೆ ಎಂದು ಬಿಜೆಪಿಯವರು ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಹೇಳಲಿ ಬಿಡಿ. ನಾನು ಕೂಡ ಮಕರ ಸಂಕ್ರಾಂತಿಗೆ ಮೋದಿ ಬದಲಾವಣೆ ಆಗುತ್ತಾರೆ ಎಂದು ಹೇಳುವೆ. ಇಂತಹ ಹೇಳಿಕೆಗಳಿಗೆಲ್ಲಾ ಅರ್ಥವಿರುತ್ತದೆಯೇ ಎಂದು ಮರು ಪ್ರಶ್ನೆ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ಪ್ರಮುಖರಾದ ಎಸ್.ಟಿ. ಹಾಲಪ್ಪ, ಚಂದ್ರಭೂಪ್ಲ, ಎಸ್.ಟಿ. ಚಂದ್ರಶೇಖರ್, ಇಸ್ಮಾಯಿಲ್ ಖಾನ್, ಹೆಚ್.ಸಿ. ಯೋಗೀಶ್, ಕಲೀಂ ಪಾಷ, ಶಿವಕುಮಾರ್, ಕಲಗೋಡು ರತ್ನಾಕರ್, ಎಂ.ಪಿ. ದಿನೇಶ್ ಪಾಟೀಲ್, ಪಿ.ಎಸ್. ಗಿರೀಶ್ ರಾವ್, ಮಂಜುನಾಥಬಾಬು, ಶಿವಣ್ಣ, ವೈ.ಬಿ. ಚಂದ್ರಕಾಂತ್, ಕಾಶಿ ವಿಶ್ವನಾಥ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: AmbedkarKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Santhosh LadNews_in_KannadaNews_KannadaShimogaShivamoggaNewsಅಂಬೇಡ್ಕರ್ಕಾರ್ಮಿಕ ಸಚಿವ ಸಂತೋಷ್ ಲಾಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿ

Next Post

ಜ.19ರಂದು ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ ಕಾರ್ಯಕ್ರಮ

kalpa News

kalpa News

Next Post
ಜ.19ರಂದು ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ ಕಾರ್ಯಕ್ರಮ

ಜ.19ರಂದು ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL