No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ : ಸಚಿವ ಡಾ. ಸುಧಾಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 3, 2022
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ : ಸಚಿವ ಡಾ. ಸುಧಾಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಸದ್ಯದಲ್ಲೇ ಶಿಲಾನ್ಯಾಸ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ Minister Sudhakar ಹೇಳಿದರು.

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ SIMS ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗದ ಆವರಣದಲ್ಲಿ ಇಂದು ಏರ್ಪಡಿಸಲಾಗಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ Covid ಸಮಯದಲ್ಲಿ ಎಲ್ಲ ಮೆಡಿಕಲ್ ಕಾಲೇಜುಗಳಲ್ಲಿ ನರ್ಸಿಂಗ್ ಕಾಲೇಜು ತೆರೆಯಬೇಕೆಂಬ ನೂತನ ನೀತಿ ರೂಪಿಸಲಾದನ್ವಯ ಶಿವಮೊಗ್ಗದಲ್ಲಿ ಇಂದು ಕಾಲೇಜು ಉದ್ಘಾಟನೆಗೊಂಡು 100 ನರ್ಸಿಂಗ್ ವಿದ್ಯಾರ್ಥಿಗಳ ದಾಖಲಾತಿಗೆ ಕೇಂದ್ರದಿಂದ ಅನುಮೋದನೆ ದೊರೆತಿದೆ.

ಅನೇಕ ಸಮಸ್ಯೆಗಳಿಗೆ ಉಪಯುಕ್ತವಾದ 128 ಸ್ಲೈಸ್ ಸಿಟಿ ಯಂತ್ರ ಉದ್ಘಾಟನೆಗೊಂಡಿದೆ. ಕೋವಿಡ್ 2ನೇ ಅಲೆಯಲ್ಲಿ ಆಮ್ಲಜನಕ ಕೊರತೆ ಅತೀವವಾಗಿ ಕಾಡಿದ್ದು, ಅಂತಹ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲ ಮೆಡಿಕಲ್ ಕಾಲೇಜುಗಳಲ್ಲಿ ಆಮ್ಲಜನಕ ಸ್ಟೋರೇಜ್ ಟ್ಯಾಂಕ್ಸ್‍ನ್ನು ದ್ವಿಗುಣಗೊಳಿಸಲಾಗಿದ್ದು, ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಕೆ ಆಗಿರುವುದು ಒಂದು ದಾಖಲೆ ಆಗಿದೆ. ಲಿಕ್ವಿಡ್ ಆಕ್ಸಿಜನ್ ಫಿಲ್ಲಿಂಗ್ ಸ್ಟೇಷನ್ ಶಿವಮೊಗ್ಗದ ವಿಶೇಷ. ಶಿವಮೊಗ್ಗದ ಸಂಸ್ಥೆಗೆ 130 ಐಸಿಯು ಬೆಡ್, 108 ಹೆಚ್‍ಡಿಡಿ ಮತ್ತು 120 ವೆಂಟಿಲೇಟರ್ ನೀಡಲಾಗಿದೆ. ಎನ್‍ಐಸಿಯು ಘಟಕ, ಸ್ಕಿಲ್ ಲ್ಯಾಲ್ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳ ಅಭಿವೃದ್ದಿಯಾಗುತ್ತಿದ್ದು ಈ ಎಲ್ಲ ಕಾರ್ಯಕ್ರಮಗಳ ಹಿಂದೆ ಬದ್ದತೆಯುಳ್ಳ ನಾಯಕರಿದ್ದಾರೆಂದರು.
50 ಕೋಟಿ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಉಚಿತವಾಗಿ ಆರೋಗ್ಯ ವಿಮೆ ನೀಡಿದ ಏಕೈಕ ದೇಶ ನಮ್ಮದು. ಪ್ರಾಥಮಿಕ ಮತ್ತು ದ್ವಿತೀಯ ಹಂತದ ಚಿಕಿತ್ಸೆಗಳು ಇತರೆ ಆಸ್ಪತ್ರೆಗಳಲ್ಲಿ ದೊರೆತರೆ ತೃತೀಯ ಹಂತದ ಚಿಕಿತ್ಸೆ ವೈದ್ಯಕೀಯ ಕಾಲೇಜುಗಳಿರುವೆಡೆ ಲಭಿಸುತ್ತದೆ. ಗುಣಮಟ್ಟದ ಸೇವೆ ನೀಡದಿದ್ದಲ್ಲಿ ಜನರು ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಹಾಗಾಗದಂತೆ ನೋಡಿಕೊಳ್ಳಬೇಕು ಎಂದರು.

ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜಿನ ಆಸ್ಪತ್ರೆಗಳು ಸಂಜೀವಿನಿ ಆಗಿ ಸೇವೆ ಸಲ್ಲಿಸಬೇಕು. ಉತ್ಕøಷ್ಟ ಚಿಕಿತ್ಸೆ ಸರ್ಕಾರದ ಕಾಯಕಲ್ಪವಾಗಿದ್ದು, ಜನರು ಉಪಕಾರ ಸ್ಮರಣೆ ಮಾಡುವ ರೀತಿಯಲ್ಲಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಕೆಲಸ ಮಾಡಬೇಕು.
ಡಾ.ಕೆ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

ಗೃಹ ಸಚಿವರಾದ ಆರಗ ಜ್ಞಾನೇಂದ್ರ Home Minister Araga Gnanendra ಮಾತನಾಡಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಡವರ ಆರೋಗ್ಯ ರಕ್ಷಣೆಯ ಕನಸು ನನಸಾಗಬೇಕು. ಮೆಡಿಕಲ್ ಕಾಲೇಜು ಮತ್ತಷ್ಟು ಬೆಳೆಯಬೇಕು. ಪ್ರಸ್ತುತ ನೀಡಿರುವ ಸೌಲಭ್ಯಗಳ ಉಪಯೋಗದ ಆತ್ಮಾವಲೋಕನ ಮಾಡಿಕೊಳ್ಳಬೇಕು. 133 ವೈದ್ಯಾಧಿಕಾರಿಗಳಿರುವ ಕಾಲೇಜಿನಲ್ಲಿ ಯಾರೂ ಚಿಕಿತ್ಸೆಯಿಂದ ಹೊರಗುಳಿಯಂತೆ, ಜನರಿಗೆ ಹೆಚ್ಚು ಓಡಾಡಿಸದೆ ಸೇವೆ ನೀಡಬೇಕು. ಹೆಚ್ಚಿನ ಚಿಕಿತ್ಸೆಗೆ ಜನರು ಮಣಿಪಾಲಕ್ಕೆ ತೆರಳುತ್ತಿರುವುದು ಇಲ್ಲಿ ಹೆಚ್ಚಿನ ಸೌಲಭ್ಯವಿಲ್ಲವೆಂಬುದನ್ನು ತೋರುತ್ತದೆ. ಆದ್ದರಿಂದ ವೈದ್ಯಾಧಿಕಾರಿಗಳಿಂದ ಹಿಡಿದು ಸಿಬ್ಬಂದಿವರೆಗೆ ಕರ್ತವ್ಯಪರತೆಯಿಂದ ಕೆಲಸ ಮಾಡಿದರೆ ನಿಮ್ಮ ಗೌರವ ಸಹ ಹೆಚ್ಚುತ್ತದೆ.

ಸಂಸದರಾದ ಬಿ.ವೈ.ರಾಘವೇಂದ್ರ MP Raghavendra ಮಾತನಾಡಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕಾಲೇಜು ಉದ್ಘಾಟನೆಯೊಂದಿಗೆ ರೂ.38.676 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರೂ.29.62 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ಇಂದು ನೆರವೇರಿದೆ. ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಮೆಗ್ಗಾನ್ ಆವರಣದಲ್ಲಿ ಮುಂಭಾಗದಲ್ಲಿ ನಿರ್ಮಿಸುವುದಕ್ಕೆ ಯೋಜನೆ ತಯಾರಿಸಲಾಗುತ್ತಿದೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮೇಲ್ಮಹಡಿಯಲ್ಲಿ ಸಹ ್ಲ ಕಾರ್ಯ ನಿರ್ವಹಿಸಿದಲ್ಲಿ ಸರ್ಕಾರಕ್ಕೆ ಹಣ ಸಹ ಉಳಿತಾಯವಾಗುತ್ತದೆ. ಕಿದ್ವಾಯಿಯಿಂದಲೇ ಕ್ಯಾನ್ಸರ್ ತಜ್ಞವೈದ್ಯರಿಂದ ಚಿಕಿತ್ಸೆ ವ್ಯವಸ್ಥೆ ಮಾಡಿದಲ್ಲಿ ಕ್ಯಾನ್ಸರ್ ಆಸ್ಪತ್ರೆ ಶೀಘ್ರವಾಗಿ ಉದ್ಘಾಟಿಸಲು ಅನುಕೂಲವಾಗುತ್ತದೆ. ಆಯುರ್ವೇದಿಕ್ ಆಸ್ಪತ್ರೆಯನ್ನೂ ಬೇಗ ಶುರು ಮಾಡಲು ಆರೋಗ್ಯ ಸಚಿವರ ಸಹಕಾರ ಬೇಕು. ನಗರಾಭಿವೃದ್ದಿ ಸಚಿವರು ಸಹ ಆಸ್ಪತ್ರೆ ಆವರಣದಲ್ಲಿ ಮೂಲಭೂತ ಸೌಕರ್ಯಕ್ಕಗಿ ರೂ.10 ಕೋಟಿ ನೀಡಿದ್ದು ಎಲ್ಲರೂ ಜಿಲ್ಲೆಯ ಅಭಿವೃದ್ದಿಗೆ ಸಹಕರಿಸುತ್ತಿದ್ದಾರೆ ಎಂದರು

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಮಾತನಾಡಿ, ಶಿವಮೊಗ್ಗ ನಮ್ಮ ನಿರೀಕ್ಷೆ ಮೀರಿ ಒಳ್ಳೆಯ ರೀತಿಯಲ್ಲಿ ಬೆಳೆಯುತ್ತಿದೆ. ಇನ್ನು ಆರೇಳು ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಮುಗಿಯಲಿದ್ದು, ನಮ್ಮ ಪ್ರಧಾನಿ ಮೋದಿಯವರನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನದಲ್ಲೇ ಕರೆತಂದು ಉದ್ಘಾಟನೆ ಮಾಡಿಸುವ ಅಪೇಕ್ಷೆ ಇದೆ ಎಂದರು.

Also read: ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಸವೇಶ್ವರ ಜಯಂತಿ ಆಚರಣೆ

ನಾನು ಉಪಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಮಂಜೂರಾದ ಶಿವಮೊಗ್ಗ ಮೆಡಿಕಲ್ ಕಾಲೇಜು ಇಂದು ರಾಜ್ಯದಲ್ಲೇ ಟಾಪ್ ಕಾಲೇಜಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಉತ್ತಮ ಸೇವೆ ನೀಡಿದೆ. ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಜನರು ಮಣಿಪಾಲಕ್ಕೆ ಹೆಚ್ಚು ಹೋಗುತ್ತಿದ್ದರು. ಆದರೆ ಈಗ ಅದು ಶೇ.90 ಕಡಿಮೆ ಆಗಿದೆ. ಆ ರೀತಿಯ ವ್ಯವಸ್ಥೆಗಳು, ಸೌಲಭ್ಯ ಶಿವಮೊಗ್ಗದಲ್ಲೇ ದೊರಕುತ್ತಿದೆ. ಯಾವುದೇ ರೋಗಿಗೆ ಅಗತ್ಯವಾದ ಎಲ್ಲ ರೀತಿಯ ಚಿಕಿತ್ಸೆ ನೀಡುವ ಪ್ರಾಮಣಿಕ ಪ್ರಯತ್ನವನ್ನು ವೈದ್ಯರು ಸೇರಿದಂತೆ ಎಲ್ಲ ಸಿಬ್ಬಂದಿ ಮಾಡಬೇಕೆಂದು ಮನವಿ ಮಾಡಿದರು.

ನಗರಾಭಿವೃದ್ದಿ ಸಚಿವರಾದ ಬೈರತಿ ಬಸವರಾಜ ಮಾತನಾಡಿ, ನಮ್ಮ ಸರ್ಕಾರ ಅಭಿವೃದ್ದಿ ಮತ್ತು ಜನಪರ ಕೆಲಸಗಳನ್ನು ಮಾಡುತ್ತಿದ್ದು ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕಾಲೇಜಿಗೆ ಅಗತ್ಯವಾದ ಯುಜಿಡಿ ಸೇರಿದಂತೆ ಇತರೆ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಲಾಗುವುದು ಎಂಬ ಭರವಸೆ ನೀಡಿದರು.

ಮುಖ್ಯ ಅತಿಥಿಗಳಾಗಿ ಪಾಲಿಕೆ ಮಹಾಪೌರರಾದ ಸುನೀತ ಅಣ್ಣಪ್ಪ, ಜ್ಯೋತಿ ಪ್ರಕಾಶ್ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ.ಶ್ರೀಧರ್, ಡಾ.ರಾಜೇಶ್ ಸುರಗಿಹಳ್ಳಿ, ಡಾ.ಸಿದ್ದನಗೌಡ ಪಾಟಿಲ್, ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ್ ಶೆಟ್ಟಿ, ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YadiyurappaCovidHome Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister SudhakarMP RaghavendraNewsinKannadaNewsKannadaShimogaShivamoggaShivamogga NewsSIMSಕೋವಿಡ್ಗೃಹ ಸಚಿವ ಆರಗ ಜ್ಞಾನೇಂದ್ರಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಶಿವಮೊಗ್ಗ_ನ್ಯೂಸ್ಸಚಿವ ಡಾ. ಕೆ ಸುಧಾಕರ್ಸಂಸದ ಬಿ.ವೈ. ರಾಘವೇಂದ್ರ
Share213Tweet123Send
Previous Post

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಸವೇಶ್ವರ ಜಯಂತಿ ಆಚರಣೆ

Next Post

ಭರದಿಂದ ಸಾಗಿದ ‘ಹುಬ್ಬಳ್ಳಿಯವ’ ಅನಿಮೇಶನ್ ಚಲನಚಿತ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭರದಿಂದ ಸಾಗಿದ ‘ಹುಬ್ಬಳ್ಳಿಯವ’ ಅನಿಮೇಶನ್ ಚಲನಚಿತ್ರ

ಭರದಿಂದ ಸಾಗಿದ 'ಹುಬ್ಬಳ್ಳಿಯವ' ಅನಿಮೇಶನ್ ಚಲನಚಿತ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸಂತುಷ್ಟರಾಗಿ ವರಗಳನ್ನು ನೀಡುವ ಶ್ರೀ ಸತ್ಯ ಸಂತುಷ್ಟ ತೀರ್ಥರು

ಸಂತುಷ್ಟರಾಗಿ ವರಗಳನ್ನು ನೀಡುವ ಶ್ರೀ ಸತ್ಯ ಸಂತುಷ್ಟ ತೀರ್ಥರು

March 18, 2026
ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

March 18, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL