ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಹಕಾರಿ ಕ್ಷೇತ್ರವನ್ನು ಭ್ರಷ್ಟಾಚಾರ ಮುಕ್ತವಾಗಿ ಮಾಡಿದಾಗ ಮಾತ್ರ ಪ್ರಗತಿ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸಹಕಾರಿಯೂ ಕೂಡ ಯೋಚಿಸಿ ಕೆಲಸ ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಕರೆ ನೀಡಿದರು.
ನಗರದ ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ಕ್ಷೇತ್ರ ಅತ್ಯಂತ ಬಲಿಷ್ಠವಾಗಿದೆ. ಆದರೆ ಕೆಲವರು ಅದನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿರುವುದರಿಂದ ಹಿನ್ನಡೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Also read: ಬಸ್ ಪ್ರಯಾಣ ಹಾಗೂ ನೀರಿನ ದರ ಏರಿಕೆ | ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ
ಸಹಕಾರ ಕ್ಷೇತ್ರವನ್ನು ಇನ್ನಷ್ಟು ಮುಂದೆ ಒಯ್ಯಲು ಪ್ರತ್ಯೇಕ ಇಲಾಖೆಯನ್ನು ಕೇಂದ್ರ ಸರ್ಕಾರ ಮಾಡಿದೆ. ಈ ಮೂಲಕ ಶಕ್ತಿ ತುಂಬುವ ಕೆಲಸವೂ ಆಗಿದೆ. ಜನರ ದುಡ್ಡು ದುರ್ಬಳಕೆಯಾಗದಂತೆ ತಡೆಯಲು ಎಲ್ಲ ಕ್ರಮಗಳನ್ನು ಕೇಂದ್ರದಿಂದ ಕೈಗೊಳ್ಳಲಾಗುತ್ತಿದೆ. ಇದರಲ್ಲಿನ ಭ್ತಷ್ಟಾಚಾರ ಹೋದರೆ ಬಡವರಿಗೆ ಅನುಕೂಲವಾಗುತ್ತದೆ ಎಂದರು.

ಯಾವುದೇ ಕ್ಷೇತ್ರವನ್ನು ಸಹಕಾರಿ ವಲಯ ಬಿಟ್ಟಿಲ್ಲಘಿ. ವೈದ್ಯಕೀಯ ಕ್ಷೇತ್ರ ಕೂಡ ಸಹಕಾರಿ ತತ್ವದಲ್ಲಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಸಹಕಾರ ಚಳುವಳಿಯ ತವರು ಶಿವಮೊಗ್ಗ ಎಂದರೆ ತಪ್ಪಾಗುವುದಿಲ್ಲ. ಹೀಗಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸಹಕಾರ ಬಲಗೊಳ್ಳಬೇಕಿದೆ ಎಂದರು ಆಶಿಸಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಸಹಕಾರ ಕ್ಷೇತ್ರ ಸರ್ಕಾರಿ ಹಿಡಿತದಿಂದ ಮುಕ್ತವಾದಾಗ ಮಾತ್ರ ಹೆಚ್ಚಿನ ಪ್ರಗತಿ ಸಾಸಲು ಸಾಧ್ಯಗಲಿದೆ. ರಾಜಕೀಯ ಹಸ್ತಕ್ಷೇಪ ಇಲ್ಲಿ ಇರಬಾರದು. ಸಾಮಾನ್ಯ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇದನ್ನು ಬೆಳೆಸಿದರೆ ಎಲ್ಲರೂ ಕೂಡ ಆರ್ಥಿಕವಾಗಿ ಶಕ್ತರಾಗಬಹುದಾಗಿದೆ ಎಂದರು.
ಸೊಸೈಟಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಹಕಾರಿ ವಿ.ರಾಜು ಪ್ರಸ್ತಾವಿಕವಾಗಿ ಮಾತನಾಡಿ, ಅನೇಕ ಹಿರಿಯರು ಸಮಾಲೋಚನೆ ನಡೆಸಿ ಹುಟ್ಟು ಹಾಕಿದ ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿ ಇಂದಿಗೂ ಸದೃಢವಾಗಿ ಮುನ್ನಡೆಯುತ್ತಿದೆ. ಪ್ರತಿನಿತ್ಯ ಸಣ್ಣ ಪುಟ್ಟ ವ್ಯವಹಾರ ನಡೆಸಿ ವನ ನಡೆಸುವವರಿಗೆ ಸಾಲ ನೀಡುತ್ತಿರುವುದು ಇದರ ಹೆಗ್ಗಳಿಕೆಯಾಗಿದೆ ಎಂದರು.
ಸೊಸೈಟಿ ಅಧ್ಯಕ್ಷ ನರಸಿಂಹ ಗಂಧದ ಮನೆ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಬಲ್ಕಿಷ್ ಬಾನು, ಡಾ.ಧನಂಜಯ ಸರ್ಜಿ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಸಹಕಾರಿಗಳಾದ ಎಸ್.ಕೆ. ಮರಿಯಪ್ಪ, ಎಂ.ಕೆ.ಸುರೇಶ್ ಕುಮಾರ್, ಉಮಾಶಂಕರ ಉಪಾಧ್ಯಾಯ, ಎಸ್.ಪಿ.ಶೇಷಾದ್ರಿ, ಸೊಸೈಟಿ ನಿರ್ದೇಶಕರಾದ ಜಿ.ಚಂದ್ರಶೇಖರ್ ಕವಿತಾ ಸಾಗರ್,ಎನ್. ಉಮಾಪತಿ ಮತ್ತಿತರರು ಇದ್ದರು.
ಸೊಸೈಟಿ ಮಾಜಿ ಅಧ್ಯಕ್ಷರು, ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







Discussion about this post