ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ನಗರದ ಮಂಡ್ಲಿ ವೃತ್ತದ ಸಮೀಪದ ಗಜಾನನ ಗ್ಯಾರೇಜ್ ಬಳಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಅರ್ಜುನ್ ಎಂದು ಗುರುತಿಸಲಾಗಿದೆ. ಅವರು ನಗರದ ಪತ್ರಿಕಾ ಕಚೇರಿಯೊಂದರಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರಂತ
ಅರ್ಜುನ್ ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮಂಡ್ಲಿ ವೃತ್ತದ ಮೂಲಕ ಹರಕೆರೆಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದರು. ರಾತ್ರಿ ಸುಮಾರು 11.30ರ ವೇಳೆಗೆ ಗಜಾನನ ಗ್ಯಾರೇಜ್ ಸಮೀಪ ಅವರ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
Also read>> ಸಾಗರದಲ್ಲಿ ಬೀದಿ ನಾಯಿಗೆ ಗುಂಡು ಹಾರಿಸಿ ಹತ್ಯೆ : ಆರೋಪಿ ಅರೆಸ್ಟ್, ಆಗಿದ್ದೇನು?
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಡಿಕ್ಕಿಯ ತೀವ್ರತೆ ಅಪಾರವಾಗಿದ್ದು, ಪರಿಣಾಮವಾಗಿ ಅರ್ಜುನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯಿಂದ ಕುಟುಂಬಸ್ಥರು ಹಾಗೂ ಸ್ನೇಹಿತರು ಶೋಕದಲ್ಲಿದ್ದಾರೆ.
Shivamogga : ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ಅಪಘಾತದ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣ ಮತ್ತು ಇತರ ವಿವರಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








