ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಕ್ರೆಬೈಲಿನಲ್ಲಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಮೂವರಲ್ಲಿ ಓರ್ವ ಸಾವು ಕಂಡಿರುವ ಘಟನೆ ವರದಿಯಾಗಿದೆ.
ಶಿವಮೊಗ್ಗ ವೆಂಕಟೇಶ್ ನಗರದ ಸನ್ನತ್ (22) ಮೃತ ಕಂಡ ಯುವಕ. ಉಳಿದ ಇಬ್ಬರಿಗೆ ಗಾಯಗಾಳಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಂಡಗದ್ದೆಗೆ ಊಟಕ್ಕೆ ತರಳಿದ್ದ ಮೂವರು ಊಟ ಮುಗಿಸಿಕೊಂಡು ಶಿವಮೊಗ್ಗಕ್ಕೆ ತೆರಳುವಾಗ ಕೆಂಪೆಗೌಡರ ಹೊಟೇಲ್ ಮುಂದಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿಗೆ ಬೆಂಕಿ ಹತ್ತಿ ಉರಿಯಲು ಯಾವುದೇ ಸರಿಯಾ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ತುಂಗಾ ನಗರ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post