ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಎನ್‌ಟಿ ರಸ್ತೆಯ ಗಜಾನನ ಗ್ಯಾರೇಜ್ ಬಳಿ ಕಾರು 2 ಬೈಕಿಗೆ ಡಿಕ್ಕಿಯಾದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಂದು ಬೈಕ್‌ನಲ್ಲಿದ್ದ ಇಬ್ಬರಿಗೆ ತೀವ್ರ ಗಾಯಗೊಂಡು ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಇಂಡಸ್ಟ್ರಿಯಲ್ ಏರಿಯಾದಲ್ಲಿ ಕಾರ್ಮಿಕನಾಗಿದ್ದ ಅಗಸನವಳ್ಳಿ ನಿವಾಸಿ ಹರೀಶ್ (19) ಎಂದು ಗುರುತಿಸಲಾಗಿದೆ. ಇನ್ನೊಂದು ಬೈಕ್‌ನಲ್ಲಿದ್ದ ಗುಣಶೇಖರ್ ಮತ್ತು ದೀಪಕ್ ಎಂಬ ಯುವಕರಿಗು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಸಂಬಂಧ ಸಂಚಾರಿ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















