ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ಸಾಗರದಲ್ಲಿ ನಡೆದಿದೆ.
ಶಿವಕುಮಾರ್ (56) ಮೃತ ದುರ್ದೈವಿ. ಇವರು ಆನಂದಪುರದಿಂದ ಮನೆ ಕಡೆ ತೆರಳುವ ವೇಳೆ ಈ ಘಟನೆ ನಡೆದಿದ್ದು, ಯಡಹಳ್ಳಿಯ ಪೆಟ್ರೋಲ್ ಬಂಕ್‌ನಿಂದ ಅಣತಿ ದೂರದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿ ಕಾರನ್ನು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ.
ಘಟನೆಯಿಂದಾಗಿ ಗಂಭೀರ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಶಿವಕುಮಾರ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.
Also read: ಶಿವರಾಜ್ ತಂಗಡಗಿ ಅವರಿಗೆ ಮಂತ್ರಿ ಸ್ಥಾನ ನೀಡಿ: ಹರ್ಷ ಭೋವಿ ಆಗ್ರಹ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post