ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾಂರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
Also read: ಎಲ್ಲ ಸಮಾಜದ ಮುಖಂಡರ ಸ್ನೇಹ ಮಿಲನ: ಡಾ. ಧನಂಜಯ ಸರ್ಜಿ ಮತಯಾಚನೆ
ಶಿವಮೊಗ್ಗ ನಿವಾಸಿ ಸತ್ತರ್ ಸಾಬ್ (55) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೂಲಿ ಕೆಲಸಕ್ಕೆ ಶಿವಮೊಗ್ಗದಿಂದ ಆಯನೂರಿಗೆ ಬಂದಿದ್ದ ವ್ಯಕ್ತಿ ಆಯನೂರಿನ ಪೆಟ್ರೋಲ್ ಬಂಕ್ ಬಳಿ ಊಟ ಮುಗಿಸಿ ಪುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಶಿವಮೊಗ್ಗ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post